ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕೋರ್ಟ್ ಕಲಾಪ ವರ್ಚ್ಯುವಲ್ ಆಗಿ ನಡೆಸಲು ನಿರ್ಧಾರ

Last Updated 30 ಡಿಸೆಂಬರ್ 2021, 17:36 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪಗಳನ್ನು ವರ್ಚ್ಯುವಲ್ ಆಗಿ ನಡೆಸಲು ದೆಹಲಿ ಹೈಕೋರ್ಟ್ ಗುರುವಾರ ನಿರ್ಧರಿಸಿದೆ. ಜನವರಿ 3ರಿಂದ 15ರವರೆಗಿನ ಕೋರ್ಟ್ ಕಲಾಪಗಳನ್ನು ವರ್ಚ್ಯುವಲ್ ಆಗಿ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೊರೊನಾ ವೈರಸ್‌ನ ಹೊಸ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಈಗಾಗಲೇ 'ಯೆಲ್ಲೊ ಅಲರ್ಟ್' ಘೋಷಣೆ ಮಾಡಲಾಗಿದೆ. ಸಂಭಾವ್ಯ ಕೋವಿಡ್ ಅಲೆಯನ್ನು ತಡೆಗಟ್ಟಲು ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಗುರುವಾರ ಕೋವಿಡ್ ಪ್ರಕರಣಗಳ ಸಂಖ್ಯೆ 1,313ಕ್ಕೆ ಏರಿಕೆಯಾಗಿದೆ. ಸಮುದಾಯಕ್ಕೂ ಓಮೈಕ್ರಾನ್ ಹರಡುತ್ತಿದೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT