ನವದೆಹಲಿ: ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ವಿವಾಹಿತ ಪುರುಷರ ಆತ್ಮಹತ್ಯೆ ತಡೆಯಲು ಮಾರ್ಗಸೂಚಿ ರೂಪಿಸಬೇಕು ಮತ್ತು ರಾಷ್ಟ್ರೀಯ ಪುರುಷರ ಆಯೋಗ ರಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ವಕೀಲ ಮಹೇಶ್ ಕುಮಾರ್ ತಿವಾರಿ ಅವರು ಸಲ್ಲಿಸಿರುವ ಅರ್ಜಿಯಲ್ಲಿ 2021ರಲ್ಲಿ ಆಕಸ್ಮಿಕ ಸಾವುಗಳ ಕುರಿತು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಪ್ರಕಟಿಸಿದ ವರದಿ ಉಲ್ಲೇಖಿಸಿದ್ದಾರೆ.

ಆ ವರ್ಷದಲ್ಲಿ ದೇಶಾದ್ಯಂತ 1,64,033 ಜನರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ 81,063 ಜನರು ವಿವಾಹಿತ ಪುರುಷರು. 28,680 ಮಂದಿ ಮಾತ್ರ ವಿವಾಹಿತ ಮಹಿಳೆಯರು ಎಂದು ಅವರು ತಮ್ಮ ಅರ್ಜಿಯಲ್ಲಿ ಅಂಕಿ–ಅಂಶ ಉಲ್ಲೇಖಿಸಿ ವಾದಿಸಿದ್ದಾರೆ.

2021ರಲ್ಲಿ ಕೌಟುಂಬಿಕ ಸಮಸ್ಯೆಗಳಿಂದಾಗಿ ಶೇ 33.2ರಷ್ಟು ಮತ್ತು ಮದುವೆ ಸಂಬಂಧಿತ ಸಮಸ್ಯೆಗಳಿಂದಾಗಿ ಶೇ 4.8ರಷ್ಟು ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷ ಒಟ್ಟು 1,18,979 ಪುರುಷರು (ಶೇ 72) ಮತ್ತು 45,026 ಮಹಿಳೆಯರು (ಶೇ 27) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಎನ್‌ಸಿಆರ್‌ಬಿಯ ಅಂಕಿಅಂಶವನ್ನು ಪ್ರಸ್ತಾಪಿಸಿದ್ದಾರೆ.

ವಿವಾಹಿತ ಪುರುಷರ ಆತ್ಮಹತ್ಯೆ ತಡೆಗೆ ಮತ್ತು ಕೌಟುಂಬಿಕ ಹಿಂಸಾಚಾರದಿಂದ ನಲುಗುತ್ತಿರುವ ಪುರುಷರ ದೂರುಗಳನ್ನು ಸ್ವೀಕರಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಚಿಸಲು ನಿರ್ದೇಶಿಸುವಂತೆ ಅರ್ಜಿದಾರರು ಸುಪ್ರೀಂ ಕೋರ್ಟ್ ಕೋರಿದ್ದಾರೆ.

ರಾಷ್ಟ್ರೀಯ ಪುರುಷರ ಆಯೋಗ ರಚನೆಗೆ ಅಗತ್ಯ ವರದಿ ನೀಡಲು, ಕೌಟುಂಬಿಕ ಹಿಂಸಾಚಾರ ಅಥವಾ ಕೌಟುಂಬಿಕ ಸಮಸ್ಯೆ ಹಾಗೂ ವಿವಾಹ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವಿವಾಹಿತ ಪುರುಷರ ಆತ್ಮಹತ್ಯೆ ಕುರಿತು ಸಂಶೋಧನೆ ನಡೆಸಲು ಕೇಂದ್ರ ಕಾನೂನು ಆಯೋಗಕ್ಕೆ ಶಿಫಾರಸು ಮಾಡಬೇಕು ಎಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.