ಶನಿವಾರ, ಅಕ್ಟೋಬರ್ 31, 2020
19 °C

ಮಥುರಾ: ಕೃಷ್ಣ ಜನ್ಮಭೂಮಿ ಬಳಿ ಮಸೀದಿ ತೆರವು ಕೋರಿ ಕೋರ್ಟ್‌ಗೆ ಅರ್ಜಿ

ಎಎನ್‌ಐ‌ Updated:

ಅಕ್ಷರ ಗಾತ್ರ : | |

An illuminated Sri Krishna Janamsthan temple ahead of Sri Krishna Janamshtami festival in Mathura. Credit: PTI

ಮಥುರಾ: ಇಲ್ಲಿನ ಕೃಷ್ಣ ಜನ್ಮಭೂಮಿ ಪ್ರದೇಶ ಹಿಂದೂಗಳಿಗೆ ಸೇರಿದ್ದು. ಕೃಷ್ಣನ ಭಕ್ತರು ಮತ್ತು ಹಿಂದೂ ಸಮುದಾಯದವರಿಗೆ ಇದು ಪವಿತ್ರ ಸ್ಥಳ ಎಂದು ವಕೀಲ ವಿಷ್ಣು ಜೈನ್ ಎಂಬುವವರು ಪ್ರತಿಪಾದಿಸಿದ್ದು, ಈ ಕುರಿತು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.

ಕೃಷ್ಣ ಜನ್ಮಭೂಮಿಯ 13.37 ಎಕರೆ ಪ್ರದೇಶ ಹಿಂದೂಗಳಿಗೆ ಸೇರಿದ್ದು. 1968ರ ರಾಜಿ ಪತ್ರವನ್ನು ಒಪ್ಪಲಾಗದು. ಕೃಷ್ಣ ಜನ್ಮಭೂಮಿಯಿಂದ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

‘ಭಗವಾನ್ ಕೃಷ್ಣನ ಜನ್ಮಸ್ಥಳವನ್ನು ‘ಕತ್ರಾ ಕೇಶವ್ ದೇವ್’ ಎಂದು ಗುರುತಿಸಲಾಗಿತ್ತು.  ಆ ಸ್ಥಳವೀಗ ಈದ್ಗಾ ಮಸೀದಿ ಟ್ರಸ್ಟ್‌ನ ನಿರ್ವಹಣಾ ಸಮಿತಿ ರಚಿಸಿರುವ ಸಂರಚನೆಯ ಕೆಳಗೆ ಇದೆ’ ಎಂದು ಅವರು ಹೇಳಿದ್ದಾರೆ.

‘ಮಥುರಾದಲ್ಲಿನ ಕೃಷ್ಣ ದೇಗುಲವನ್ನು ಮುಘಲ್ ದೊರೆ ಔರಂಗಜೇಬ್ ಧ್ವಂಸಗೊಳಿಸಿದ್ದ ಎಂಬುದುನ್ನು ಇತಿಹಾಸದಿಂದ ತಿಳಿಯಬಹುದು. ಕೃಷ್ಣ ಜನ್ಮಭೂಮಿಯಲ್ಲಿದ್ದ ದೇಗುಲವೂ ಸೇರಿದಂತೆ ಅನೇಕ ಹಿಂದೂ ದೇಗುಲಗಳನ್ನು ಔರಂಗಜೇಬ್ ಧ್ವಂಸಗೊಳಿಸಿದ್ದ’ ಎಂದೂ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು