ಗುರುವಾರ , ಮಾರ್ಚ್ 23, 2023
23 °C

ಸುಖ್ವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶದ ಸಿಎಂ? ನಾಳೆ ಪ್ರಮಾಣವಚನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ:  ಸುಖ್ವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿವೆ. ಭಾನುವಾರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಇದೇ ವಿಚಾರವಾಗಿ ಕಲಬುರ್ಗಿಯಲ್ಲಿ ಶನಿವಾರ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ 10 ಅಂಶಗಳನ್ನು ಮುಂದಿಟ್ಟು ನಾವು ಹಿಮಾಚಲ ಪ್ರದೇಶದಲ್ಲಿ ಬಹುಮತ ಗಳಿಸಿದ್ದೇವೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ’ ಎಂದು ಹೇಳಿದರು. 

ಪಕ್ಷದ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಇದೇ ಮೊದಲ ಬಾರಿಗೆ ತವರಿಗೆ ಆಗಮಿಸಿದ್ದು, ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು