ಹಿಮಾಚಲ ಪ್ರದೇಶ ಸಿಎಂ ಆಗಿ ಸುಖ್ವಿಂದರ್ ಸಿಂಗ್, ಡಿಸಿಎಂ ಆಗಿ ಮುಖೇಶ್ ಆಯ್ಕೆ

ಶಿಮ್ಲಾ: ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಹಿಮಾಚಲ ಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಮತ್ತು ಉಪ ಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಹೆಸರನ್ನು ಶನಿವಾರ ಪಕ್ಷ ಪ್ರಕಟಿಸಿದೆ.
ಹಮೀರ್‌ಪುರ್ ಜಿಲ್ಲೆಯ ನದೌನ್ ಕ್ಷೇತ್ರದ ಶಾಸಕರಾದ 58 ವರ್ಷದ ಸುಖು, ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದು, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಶುಕ್ರವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುಖು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 68 ಕ್ಷೇತ್ರಗಳ ಪೈಕಿ 40ರಲ್ಲಿ ಜಯಿಸಿತ್ತು. ನವೆಂಬರ್ 12ರಂದು ನಡೆದ ಚುನಾವಣೆ ಫಲಿತಾಂಶ ಡಿಸೆಂಬರ್ 8ರಂದು ಪ್ರಕಟವಾಗಿತ್ತು.
ಹಿಮಾಚಲ ಪ್ರದೇಶದ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಸುಖು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್‌ನ ಹಿರಿಯ ನಾಯಕ, 6 ಬಾರಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.