ಶನಿವಾರ, ಮೇ 28, 2022
30 °C

ಸುಲ್ಲಿ ಡೀಲ್ಸ್‌ ಸೃಷ್ಟಿಕರ್ತನಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿವಾದಾತ್ಮಕ ಸುಲ್ಲಿ ಡೀಲ್ಸ್ ಆ್ಯಪ್‌ ಅನ್ನು ಸೃಷ್ಟಿಸಿದ ಆರೋಪದ ಮೇರೆಗೆ ಬಂಧಿತನಾಗಿರುವ ಓಂಕಾರೇಶ್ವರ ಠಾಕೂರ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯವೊಂದು ತಿರಸ್ಕರಿಸಿದೆ. ಈ ಹಂತದಲ್ಲಿ ಜಾಮೀನು ನೀಡಿದರೆ ನಿಷ್ಪಕ್ಷಪಾತ ತನಿಖೆಯ ಹಾದಿ ತಪ್ಪಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನೂರಕ್ಕೂ ಅಧಿಕ ಖ್ಯಾತ ಮುಸ್ಲಿಂ ಮಹಿಳೆಯರ ಕುರಿತು ಮಾಹಿತಿ ನೀಡಿ ಬಳಕೆದಾರರು ಅವರ ಹರಾಜಿನಲ್ಲಿ ಪಾಲ್ಗೊಳ್ಳುವಂತೆ ಮಾಡುವ ಈ ಸುಲ್ಲಿ ಡೀಲ್ಸ್‌ ಆ್ಯಪ್‌ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಬುಲ್ಲಿ ಬಾಯಿ ಆ್ಯಪ್‌ ಪ್ರಕರಣದ ರೂವಾರಿ ನೀರಜ್‌ ಬಿಷ್ಣೋಯ್‌ ಎಂಬಾತ ತನಿಖೆಯ ವೇಳೆ ನೀಡಿದ ಮಾಹಿತಿ ಮೇರೆಗೆ ದೆಹಲಿಯ ವಿಶೇಷ ಘಟಕದ ಪೊಲೀಸರು ಇಂದೋರ್‌ನಲ್ಲಿ ಕಳೆದ ವಾರ ಆರೋಪಿ ಓಂಕಾರೇಶ್ವರ ಠಾಕೂರ್‌ನನ್ನು ಬಂಧಿಸಿದ್ದರು.

ಜಾಮೀನು ಕುರಿತ ವಾದ, ಪ್ರತಿವಾದವನ್ನು ಆಲಿಸಿದ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಸುಂಧರಾ ಚೌಂಕರ್‌ ಅವರು ಆರೋಪಿಗೆ ಜಾಮೀನು ನಿರಾಕರಿಸಿ ಆದೇಶ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು