ಮಂಗಳವಾರ, ನವೆಂಬರ್ 24, 2020
19 °C

ಎನ್‌ಸಿಬಿಯಿಂದ ಸಮನ್ಸ್‌, ದೀಪಿಕಾ ಪಡುಕೋಣೆ ಉದ್ಯಮ ವ್ಯವಸ್ಥಾಪಕಿ ನಾಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರ ಉದ್ಯಮ ವ್ಯವಸ್ಥಾಪಕಿ ಕರಿಷ್ಮಾ ಪ್ರಕಾಶ್‌ ಮಾದಕ ವಸ್ತುಗಳ ನಿಯಂತ್ರಣ ದಳದ (ಎನ್‌ಸಿಬಿ) ವಿಚಾರಣೆಗೆ ಇಲ್ಲಿಯವೆರಗೂ ಹಾಜರಾಗಿಲ್ಲ, ಅವರು ’ನಾಪತ್ತೆಯಾಗಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಅಕ್ಟೋಬರ್‌ ತಿಂಗಳಲ್ಲಿ ಕರಿಷ್ಮಾ ಪ್ರಕಾಶ್‌ ಮನೆಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸಿದ ಸಂದರ್ಭದಲ್ಲಿ 1.7ಗ್ರಾಂ ಹಶೀಶ್‌  ಪತ್ತೆಯಾಗಿತ್ತು. ಹಾಗಾಗಿ ಅವರಿಗೆ ಸಮನ್ಸ್‌ ನೀಡಲಾಗಿತ್ತು ಎಂದು ಎನ್‌ಸಿಬಿ ಮೂಲಗಳು ತಿಳಿಸಿವೆ.

ವಿಚಾರಣೆಗೆ ಹಾಜರಾಗಿ, ಹೇಳಿಕೆಯನ್ನು ದಾಖಲಿಸಲು ಎನ್‌ಸಿಬಿ ಅನೇಕ ಬಾರಿ ಅವರಿಗೆ ಸಮನ್ಸ್‌ ಕಳುಹಿಸಿದೆ. ಆದರೆ ಅವರು ಯಾವ ಸಮನ್ಸ್‌ಗೂ ಪ್ರತಿಕ್ರಿಯೆ ನೀಡಿಲ್ಲ ಹಾಗೂ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕರಿಷ್ಮಾ ಪ್ರಕಾಶ್‌ ಈಗಾಗಲೇ ನಿರೀಕ್ಷಣಾ ಜಾಮೀನಿಗೂ ಅರ್ಜಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು