ಗುರುವಾರ , ಜನವರಿ 28, 2021
16 °C

ಬಿಜೆಪಿ ಸಂಸದ ಸನ್ನಿ ಡಿಯೋಲ್‌ಗೆ ಕೋವಿಡ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

'ನನಗೆ ಕೋವಿಡ್‌–19 ಇರುವುದು ದೃಢಪಟ್ಟಿದೆ. ಹಾಗಾಗಿ ನನ್ನೊಂದಿಗೆ ನಿಕಟ ಸಂಪರ್ಕಕ್ಕೆ ಬಂದವರು ಸೋಂಕು ತಪಾಸಣೆ ಮಾಡಿಸಿಕೊಳ್ಳಿ’ ಎಂದು ಬಾಲಿವುಡ್‌ ನಟ ಮತ್ತು ಬಿಜೆಪಿ ಸಂಸದ ಸನ್ನಿ ಡಿಯೋಲ್‌ ಅವರು ಬುಧವಾರ ಮನವಿ ಮಾಡಿದ್ದಾರೆ.

ಈ  ಬಗ್ಗೆ ಸನ್ನಿ ಡಿಯೋಲ್‌ ಅವರು ಟ್ವಿಟರ್‌ ಮೂಲಕ ತಿಳಿಸಿದ್ದಾರೆ.

‘ಕೋವಿಡ್‌ ದೃಢಪಟ್ಟ ಬಳಿಕ ನಾನು ಪ್ರತ್ಯೇಕವಾಗಿ ವಾಸವಾಗಿದ್ದೇನೆ. ನನ್ನ ನಿಕಟ ಸಂಪಕರ್ಕಕ್ಕೆ ಬಂದವರು ಕೂಡ ಕೋವಿಡ್‌ ಪರೀಕ್ಷೆಯನ್ನು ಮಾಡಿಸಿಕೊಳ್ಳಿ ಎಂದು ನಾನು ಕೇಳಿಕೊಳ್ಳುತ್ತೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ನೀಡಿದ ಮಾಹಿತಿ ಪ್ರಕಾರ ಸನ್ನಿ ಡಿಯೋಲ್‌ ಅವರು ತನ್ನ ಸ್ನೇಹಿತರೊಂದಿಗೆ ಮುಂಬೈಗೆ ತೆರಳಲು ಯೋಜನೆ ರೂಪಿಸಿದ್ದರು. ಆದರೆ ಅವರಲ್ಲಿ ಕೋವಿಡ್‌ ದೃಢಪಟ್ಟ ಕಾರಣ ಸನ್ನಿ ಕುಲು ಜಿಲ್ಲೆಯಲ್ಲಿ ಸ್ವಲ್ಪ ಸಮಯ ಇರಲಿದ್ದಾರೆ’ ಎಂದು ಹಿಮಾಚಲ ಪ್ರದೇಶದ ಆರೋಗ್ಯ ಕಾರ್ಯದರ್ಶಿ ಅಮಿತಾಬ್‌ ಅವಸ್ತಿ ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು