ಬುಧವಾರ, ಜೂನ್ 16, 2021
28 °C

ಸುಪ್ರಿಂ ಕೋರ್ಟ್‌ಗೆ ಮೇ 8ರಿಂದಲೇ ಬೇಸಿಗೆ ರಜೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಒಂದು ವಾರ ಮೊದಲೇ ಅಂದರೆ ಮೇ 8ರಿಂದಲೇ ಜಾರಿಗೆ ಬರಲಿದೆ ಎಂದು ಸುಪ್ರಿಂ ಕೋರ್ಟ್‌ ಸೋಮವಾರ ಪ್ರಕಟಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು ತಮ್ಮ ಕೆಲಸದ ಮೊದಲ ದಿನವೇ, ಸುಪ್ರೀಂ ಕೋರ್ಟ್‌ನ ವಕೀಲರ ಸಂಘ ಸೇರಿದಂತೆ ವಿವಿಧ ಸಂಘಗಳ ಪದಾಧಿಕಾರಿಗಳ ಜೊತೆಗೆ ಕೋವಿಡ್ ಪರಿಸ್ಥಿತಿ ಕುರಿತು ಸಭೆ ನಡೆಸಿದರು.

ಹಿರಿಯ ವಕೀಲ, ಎಸ್‌ಸಿಬಿಎ ಅಧ್ಯಕ್ಷ ವಿಕಾಸ್ ಸಿಂಗ್ ಅವರು, ಬೇಸಿಗೆ ರಜೆಯು ಮೇ 8ರಿಂದ ಆರಂಭವಾಗಿ ಜೂನ್‌ 27ರವರೆಗೂ ಇರುವಂತೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಈ ಮೊದಲಿನ ವೇಳಾಪಟ್ಟಿಯಂತೆ ಬೇಸಿಗೆ ರಜೆ ಮೇ 14ರಂದು ಆರಂಭವಾಗಬೇಕಿತ್ತು.

ಅಲ್ಲದೆ, ಸುಪ್ರಿಂ ಕೋರ್ಟ್‌ನ ನೂತನ ಕಟ್ಟಡದಲ್ಲಿ ಕೋವಿಡ್ ಆರೈಕೆ ಕೇಂದ್ರ ಆರಂಭಿಸುವ ತೀರ್ಮಾನಕ್ಕೂ ಸಿಜೆಐ ಸಮ್ಮತಿಸಿದರು ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು