ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪು ಕೋಟೆ ದಾಳಿ: ಉಗ್ರ ಆರಿಫ್‌ಗೆ ಗಲ್ಲು ಶಿಕ್ಷೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

Last Updated 3 ನವೆಂಬರ್ 2022, 6:02 IST
ಅಕ್ಷರ ಗಾತ್ರ

ನವದೆಹಲಿ: 2000ರ ದೆಹಲಿಯ ಕೆಂಪು ಕೋಟೆ ದಾಳಿ ಪ್ರಕರಣದಲ್ಲಿ ಲಷ್ಕರ್ ಎ ತಯಬಾ (ಎಲ್‌ಇಟಿ) ಉಗ್ರ ಸಂಘಟನೆಯ ಉಗ್ರಗಾಮಿ ಮೊಹಮ್ಮದ್ ಆರಿಫ್‌ಗೆ ವಿಧಿಸಲಾದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.

ಗಲ್ಲು ಶಿಕ್ಷೆ ತೀರ್ಪಿನ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ.

ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠವು, ಮರುಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿದ್ದು, ವಿದ್ಯುನ್ಮಾನ ದಾಖಲೆಗಳನ್ನು ಪರಿಗಣಿಸಬೇಕೆಂಬ ಮನವಿ ಸ್ವೀಕರಿಸಿದೆ ಎಂದು ಹೇಳಿದೆ.

2000 ಡಿಸೆಂಬರ್ 2ರಂದು ಕೆಂಪು ಕೋಟೆಗೆ ನುಗ್ಗಿ ಉಗ್ರ ನಡೆಸಿದ್ದ ಗುಂಡಿನ ದಾಳಿಯಲ್ಲಿ ಇಬ್ಬರು ಸೈನಿಕರು ಸೇರಿದಂತೆ ಮೂವರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT