ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ಯೋಜನೆ ಪ್ರಶ್ನಿಸಿ ಅರ್ಜಿ: ಮುಂದಿನ ವಾರ ಸುಪ್ರೀಂ ಕೋರ್ಟ್‌ ವಿಚಾರಣೆ

Last Updated 4 ಜುಲೈ 2022, 7:35 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ 'ಅಗ್ನಿಪಥ' ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮುಂದಿನ ವಾರ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

‘ಅಗ್ನಿಪಥ ಯೋಜನೆಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಸೂಕ್ತ ಪೀಠವು ಮುಂದಿನ ವಾರ ನಡೆಸಲಿದೆ’ ಎಂದು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಜೆ.ಕೆ.ಮಹೇಶ್ವರಿ ಅವರನ್ನು ಒಳಗೊಂಡ ಪೀಠ ತಿಳಿಸಿದೆ.

ಯೋಜನೆಯ ವಿರುದ್ಧ ಅರ್ಜಿ ಸಲ್ಲಿಸಿರುವ ವಕೀಲರು, ‘ಭಾರತೀಯ ವಾಯುಪಡೆಯ ಆಕಾಂಕ್ಷಿಗಳು ತರಬೇತಿ ಪಡೆದು ನೇಮಕಾತಿ ಪತ್ರಗಳಿಗಾಗಿ ಕಾಯುತ್ತಿದ್ದಾರೆ. ಆದರೆ, ಈಗ ಅವರ ವೃತ್ತಿಜೀವನವನ್ನು 20 ವರ್ಷಗಳಿಂದ ನಾಲ್ಕು ವರ್ಷಗಳಿಗೆ ಮೊಟಕುಗೊಳಿಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ,

‘ಇದು ತುರ್ತು ವಿಚಾರಣೆ ಮಾಡಬೇಕಾದ ವಿಷಯ. ಕಾರಣ, ಲಕ್ಷಾಂತರ ಆಕಾಂಕ್ಷಿಗಳ ವೃತ್ತಿಜೀವನವು ಅಪಾಯದಲ್ಲಿದೆ’ ಎಂದು ವಕೀಲರು ಹೇಳಿದ್ದಾರೆ.

ಸೇನಾ ಪಡೆಗಳಿಗೆ ಯುವ ಜನರನ್ನು ನಾಲ್ಕು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳುವ ‘ಅಗ್ನಿಪಥ ಯೋಜನೆ’ಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಇದಕ್ಕೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT