ಶನಿವಾರ, ಡಿಸೆಂಬರ್ 5, 2020
25 °C

ಕೃಷಿ ಮಸೂದೆಗಳ ವಿರುದ್ಧ ಸುಪ್ರೀಂಗೆ ಮೊರೆ: ಪಂಜಾಬ್‌ ಸಿಎಂ ಅಮರಿಂದರ್‌ ಸಿಂಗ್‌

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಪಂಜಾಬ್‌: ಕೇಂದ್ರದ ಕೃಷಿ ಮಸೂದೆಗಳ ವಿರುದ್ಧ ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ಅವರ ಹುಟ್ಟೂರಾದ ಖಟ್ಕರ್‌ ಕಲಾನ್‌ನಲ್ಲಿ ಧರಣಿ ನಡೆಸಿದ್ದಾರೆ. 

ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ಧ ಹರಿಹಾಯ್ದಿರುವ ಅವರು, 'ಕೃಷಿ ಮಸೂದೆಗಳನ್ನು ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಲಿದ್ದೇವೆ. ಕೃಷಿ ಎಂಬುದು ರಾಜ್ಯಾಡಳಿತಕ್ಕೆ ಸಂಬಂದಿಸಿದ ವಿಷಯ. ಆದರೆ, ನಮ್ಮನ್ನು ಕೇಳದೆ ಸಂಸತ್‌ನಲ್ಲಿ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದು ಸಂಪೂರ್ಣವಾಗಿ ಅಸಂವಿಧಾನಿಕ' ಎಂದು ಅಮರಿಂದರ್‌ ಸಿಂಗ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪಂಜಾಬ್‌ನ ಹೆಚ್ಚಿನ ರೈತರು ಸಣ್ಣ ಹಿಡುವಳಿದಾರರಾಗಿದ್ದು, ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಸಂಬಂಧಿತ ಕಾನೂನುಗಳು ಅವರನ್ನು ತೀವ್ರ ಸಂಕಷ್ಟಕ್ಕೀಡು ಮಾಡಲಿವೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ವಾರಗಳಿಂದ ಪಂಜಾಬ್, ಹರಿಯಾಣ, ಕರ್ನಾಟಕ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಕೇಂದ್ರದ ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು