ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್‌ ಸಂಖ್ಯೆ ಜೊತೆ ಮತದಾರರ ಚೀಟಿ ಲಿಂಕ್: ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ

ಅಕ್ಷರ ಗಾತ್ರ

ನವದೆಹಲಿ: ಆಧಾರ್‌ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯ ಜತೆಗೆ ಸಂಯೋಜಿಸುವುದನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಅವರಿಗೆ ದೆಹಲಿ ಹೈಕೋರ್ಟ್‌ಗೆ ಹೋಗಲು ಸುಪ್ರೀಂ ಕೋರ್ಟ್ ಸೂಚಿಸಿದೆ.

ಈ ಹಿಂದೆ ಆಧಾರ್‌ ಸಂಖ್ಯೆಯನ್ನುಮತದಾರರ ಗುರುತಿನ ಚೀಟಿ ಸಂಯೋಜಿಸುವುದಕ್ಕೆ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ 2021ಕ್ಕೆ ಸಂಸತ್ತು ಅನುಮೋದನೆ ನೀಡಿತ್ತು.

ಇದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಸುರ್ಜೇವಾಲ, ಕೋರ್ಟ್ ಮೆಟ್ಟಿಲೇರಿದ್ದರು. ಈಗ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಹಾಗೂ ಎ.ಎಸ್. ಬೋಪಣ್ಣ ಅವರಿದ್ದ ಪೀಠವು ದೆಹಲಿ ಹೈಕೋರ್ಟ್ ಹೋಗುವಂತೆನಿರ್ದೇಶಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT