ಗುರುವಾರ , ಜನವರಿ 27, 2022
21 °C

ಮೇಕೆದಾಟು: ಎಲ್ಲ ಅರ್ಜಿಗಳ ಒಟ್ಟುಗೂಡಿಸಿ 27ರಂದು ವಿಚಾರಣೆಗೆ ‘ಸುಪ್ರೀಂ’ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮೇಕೆದಾಟು ಅಣೆಕಟ್ಟು  ಯೋಜನೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟುಗೂಡಿಸಿ ಜನವರಿ 27ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ದಕ್ಷಿಣ ಪೀಠದ ಆದೇಶವನ್ನು ವಜಾ ಮಾಡಿದ್ದ ಎನ್‌ಜಿಟಿ ಪ್ರಧಾನ ಪೀಠದ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನೂ ಸುಪ್ರೀ ಕೋರ್ಟ್ ಇತರೆ ಅರ್ಜಿಗಳ ಜೊತೆಗೆ ಪರಿಣಿಸಲಿದೆ.

ಕಾವೇರಿಗೆ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕಾಮಗಾರಿಯನ್ನು ಕರ್ನಾಟಕ ಸರ್ಕಾರ ಆರಂಭಿಸಿದೆಯೇ ಎಂಬ ಬಗ್ಗೆ ಸ್ಥಳ ಪರಿಶೀಲನೆಗಾಗಿ ಜಂಟಿ ಸಮಿತಿ ರಚಿಸಲು ಎನ್‌ಜಿಟಿಯ ದಕ್ಷಿಣ ಪೀಠ ಆದೇಶಿಸಿತ್ತು. ಪ್ರಧಾನ ಪೀಠವು ನಂತರ ವಜಾ ಮಾಡಿತ್ತು.

ಪ್ರಧಾನಪೀಠದ ಆದೇಶದ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಯು ವಿಚಾರಣೆಗೆ ಬಂದಾಗ ನ್ಯಾಯಮೂರ್ತಿ ಡಿ.ಚಂದ್ರಚೂಡ್‌ ನೇತೃತ್ವದ ಪೀಠವು, ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಒಟ್ಟಾಗಿಸಿ 27ರಂದು ವಿಚಾರಣೆ ನಡೆಸುವ ತೀರ್ಮಾನವನ್ನು ಪ್ರಕಟಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು