ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಮಿನಲ್ ಪ್ರಕರಣಗಳ ಆರೋಪಿಗಳಿಗೆ ಜಾಮೀನು: ಕಾಯ್ದೆ ರೂಪಿಸಲು 'ಸುಪ್ರೀಂ' ಸೂಚನೆ

Last Updated 11 ಜುಲೈ 2022, 11:15 IST
ಅಕ್ಷರ ಗಾತ್ರ

ನವದೆಹಲಿ: ‘ಕ್ರಿಮಿನಲ್‌ ಪ್ರಕರಣಗಳ ಆರೋಪಿಗಳ ಬಿಡುಗಡೆ ಪ್ರಕ್ರಿಯೆಯನ್ನು ಸರಳಗೊಳಿಸಲು, ಅವರಿಗೆ ಜಾಮೀನು ನೀಡುವ ಸಂಬಂಧ ಹೊಸದಾಗಿ ಕಾಯ್ದೆ ರೂಪಿಸಬೇಕು’ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಈ ಸಂಬಂಧ ಕೆಲ ಸೂಚನೆಗಳನ್ನೂ ನೀಡಿದ ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌ ಮತ್ತು ಎಂ.ಎಂ.ಸುಂದರೇಶ್‌ ಅವರಿಂದ ಪೀಠವು, ‘ತನಿಖಾ ಸಂಸ್ಥೆಗಳು, ಅದರ ಅಧಿಕಾರಿಗಳು ಅಪರಾಧ ದಂಡ ಸಂಹಿತೆಯ ಸೆಕ್ಷನ್‌ 41–ಎಗೆ ಬದ್ಧರಾಗಿರಬೇಕು’ ಎಂದು ತಿಳಿಸಿತು.

ಜಾಮೀನು ಪಡೆಯಲು ಇರುವ ನಿಬಂಧನೆಗಳನ್ನು ಈಡೇರಿಸಲು ಶಕ್ತರಲ್ಲದ ವಿಚಾರಣಾಧೀನ ಕೈದಿಗಳನ್ನು ಗುರುತಿಸಿ, ಅವರ ಬಿಡುಗಡೆಗೆ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಪೀಠ ಇದೇ ಸಂದರ್ಭದಲ್ಲಿ ಎಲ್ಲ ಹೈಕೋರ್ಟ್‌ಗಳಿಗೆ ನಿರ್ದೇಶಿಸಿತು.

ಈ ವಿಷಯಕ್ಕೆ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿಯನ್ನು ನಾಲ್ಕು ತಿಂಗಳಲ್ಲಿ ಸಲ್ಲಿಸಬೇಕು ಎಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೂ ಪೀಠವು ನಿರ್ದೇಶನ ನೀಡಿತು.

ಪ್ರಕರಣವೊಂದರ ಸಂಬಂಧ ಸಿಬಿಐ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡುವಾಗ ಸುಪ್ರೀಂ ಕೋರ್ಟ್ ಈ ನಿರ್ದೇಶನಗಳನ್ನು ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT