ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಸತ್ಯೇಂದರ್ ಜೈನ್ ಜಾಮೀನು ಅರ್ಜಿ ನಾಳೆ ವಿಚಾರಣೆ

Last Updated 21 ಸೆಪ್ಟೆಂಬರ್ 2022, 9:34 IST
ಅಕ್ಷರ ಗಾತ್ರ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಚಿವ ಸತ್ಯೇಂದರ್ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆ ಗುರುವಾರ ನಡೆಯಲಿದೆ.

ಜಾಮೀನು ಅರ್ಜಿಯ ವಿಚಾರಣೆ ನಡೆಸುವಂತೆ ದೆಹಲಿಯ ಸೆಷೆನ್ಸ್ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.

ಜೈನ್ ವಿರುದ್ಧದ ಪ್ರಕರಣವನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು ಎಂಬ ಜಾರಿ ನಿರ್ದೇಶನಾಲಯದ (ಇ.ಡಿ) ಅರ್ಜಿಯ ಬಗ್ಗೆ ವಿಚಾರಣೆ ನಡೆಸಿ ನಿರ್ಧಾರ ಕೈಗೊಳ್ಳುವಂತೆಯೂ ದೆಹಲಿಯ ರೋಸ್ ಅವೆನ್ಯೂ ಸೆಷೆನ್ಸ್ ನ್ಯಾಯಾಧೀಶರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ ಎಂದು ‘ಎಎನ್ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಜೈನ್ ಅವರನ್ನು ಮೇ 30ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT