ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಎಚ್‌ಆರ್‌ಸಿ ಖಾಲಿ ಹುದ್ದೆ ಭರ್ತಿಗೆ ಕೋರಿಕೆ: ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

Last Updated 9 ಸೆಪ್ಟೆಂಬರ್ 2021, 8:02 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿ (ಎನ್‌ಎಚ್‌ಆರ್‌ಸಿ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಗುರುವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಲ್‌. ನಾಗೇಶ್ವರ ರಾವ್‌ ಮತ್ತು ಬಿ.ಆರ್‌. ಗವಾಯಿ ಅವರನ್ನೊಳಗೊಂಡ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅರುಣ್‌ ಮಿಶ್ರಾ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಜತೆಗೆ, ಸದಸ್ಯರನ್ನು ನೇಮಿಸಲಾಗಿದೆ. ಹೀಗಾಗಿ, ಈ ಅರ್ಜಿಯು ಅಪ್ರಸ್ತುತ ಎಂದು ಪೀಠವು ಹೇಳಿದೆ.

ವಕೀಲರಾದ ರಾಧಾಕಾಂತ್‌ ತ್ರಿಪಾಠಿ ಅವರು ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು. ಆಯೋಗದಲ್ಲಿ ಖಾಲಿ ಇರುವ ಎರಡು ಹುದ್ದೆಗಳನ್ನು ಭರ್ತಿ ಮಾಡಲು ನಿರ್ದೇಶನ ನೀಡುವಂತೆ ಅವರು ಕೋರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT