ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುವಾರವೇ ಬಹುಮತ ಸಾಬೀತುಪಡಿಸಿ: ‘ಮಹಾ’ ಸರ್ಕಾರಕ್ಕೆ ‘ಸುಪ್ರೀಂ’ ಸೂಚನೆ

ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಜೂನ್‌ 30ರಂದು ಬಹುಮತ ಸಾಬೀತುಪಡಿಸುವಂತೆ ಮಹಾ ವಿಕಾಸ್‌ ಆಘಾಡಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಬುಧವಾರ ಆದೇಶಿಸಿದೆ.

ಜೈಲಿನಲ್ಲಿರುವ ಎನ್‌ಸಿಪಿ ಶಾಸಕರಾದ ನವಾಬ್‌ ಮಲಿಕ್ ಮತ್ತು ಅನಿಲ್ ದೇಶ್‌ಮುಖ್ ಅವರನ್ನು ವಿಧಾನಸಭೆಗೆ ಕರೆತರಲು ಸಿಬಿಐ ಹಾಗೂ ಜಾರಿ ನಿರ್ದೇನಾಲಯಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಬಹುಮತ ಸಾಬೀತುಪಡಿಸಲು ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಸೂಚನೆ ನೀಡಿದ ಬೆನ್ನಲ್ಲೇ, ಇದರ ವಿರುದ್ಧ ಶಿವಸೇನಾ, ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದವು.

ಜೂನ್‌ 30ರಂದು ಬೆಳಿಗ್ಗೆ 11 ಗಂಟೆಗೆ ಬಹುಮತ ಸಾಬೀತು ಪಡಿಸಬೇಕು ಎಂದು ಪತ್ರದ ಮೂಲಕ ಕೋಶಿಯಾರಿ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದ್ದರು.

ಮಹಾರಾಷ್ಟ್ರದಲ್ಲಿ ಶಿವಸೇನಾ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ಪಕ್ಷಗಳನ್ನೊಳಗೊಂಡ ಮಹಾ ವಿಕಾಸ್‌ ಆಘಾಡಿ ಮೈತ್ರಿಕೂಟ ಅಧಿಕಾರದಲ್ಲಿದೆ. ಶಾಸಕ ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನಾದ ಕನಿಷ್ಠ 38 ಶಾಸಕರು ಉದ್ಧವ್‌ ಠಾಕ್ರೆ ವಿರುದ್ಧ ಬಂಡಾಯವೆದ್ದಿದ್ದಾರೆ.

ಮಹಾರಾಷ್ಟ್ರದಲ್ಲಿನ ಬಲಾಬಲ

288 ಸದಸ್ಯರನ್ನು ಒಳಗೊಂಡಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನಾ 55 ಶಾಸಕರ ಬಲ ಹೊಂದಿದೆ. ಎನ್‌ಸಿಪಿ 53, ಕಾಂಗ್ರೆಸ್‌ನ 44, ಬಹುಜನ ವಿಕಾಸ ಆಘಾಡಿ 3, ಸಮಾಜವಾದಿ ಪಕ್ಷ, ಎಐಎಂಐಎಂ ಹಾಗೂ ಪ್ರಹಾರ್‌ ಜನಶಕ್ತಿ ಪಾರ್ಟಿಯ ತಲಾ ಇಬ್ಬರು ಶಾಸಕರಿದ್ದಾರೆ.

ಎಂಎನ್‌ಎಸ್‌, ಸಿಪಿಐ (ಎಂ), ಪಿಡಬ್ಲ್ಯುಪಿ, ಸ್ವಾಭಿಮಾನಿ ಪಕ್ಷ, ರಾಷ್ಟ್ರೀಯ ಸಮಾಜ ಪಾರ್ಟಿ, ಜನಸೂರ್ಯ ಶಕ್ತಿ ಪಾರ್ಟಿ ಹಾಗೂ ಕ್ರಾಂತಿಕಾರಿ ಶೆತಕರಿ ಪಕ್ಷದಿಂದ ತಲಾ ಒಬ್ಬರು ಶಾಸಕರಿದ್ದಾರೆ. 13 ಮಂದಿ ಪಕ್ಷೇತರ ಶಾಸಕರು ಹಾಗೂ ವಿರೋಧ ಪಕ್ಷ ಬಿಜೆಪಿಯಲ್ಲಿ 106 ಶಾಸಕರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT