ಎಂಡಿಎಸ್ ಪ್ರವೇಶಕ್ಕೆ ಕೌನ್ಸೆಲಿಂಗ್: ಕೇಂದ್ರದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ನವದೆಹಲಿ: ‘ಎಂಡಿಎಸ್’ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ದಿನಾಂಕಗಳನ್ನು ಶೀಘ್ರವೇ ಪ್ರಕಟಿಸಲು ಮೆಡಿಕಲ್ ಕೌನ್ಸೆಲಿಂಗ್ ಕಮಿಟಿಗೆ (ಎಂಸಿಸಿ) ನಿರ್ದೇಶನ ನೀಡುವಂತೆ ಕೋರಿ 9 ಜನ ದಂತ ವೈದ್ಯರು ಸಲ್ಲಿಸಿರುವ ಅರ್ಜಿ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಇತರರಿಗೆ ಸುಪ್ರೀಂಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ಪೀಠ, ಕೇಂದ್ರ ಸರ್ಕಾರ ಮತ್ತು ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಸೇರಿದಂತೆ ಇತರರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಿತು.
ಬಿಡಿಎಸ್ ಪದವಿ ಪಡೆದ ವೈದ್ಯರು, ಎಂಡಿಎಸ್ ಪ್ರವೇಶಕ್ಕಾಗಿ ಕಳೆದ ವರ್ಷ ಡಿಸೆಂಬರ್ 16ರಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಬಿಇ) ನಡೆಸಿದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ಎನ್‌ಇಇಟಿ) ಬರೆದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.