ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ಕೋರ್ಟ್‌: ಹೊಸ ನ್ಯಾಯಮೂರ್ತಿಗಳ ಅಧಿಕಾರ ಸ್ವೀಕಾರ ಇಂದು

Last Updated 29 ಆಗಸ್ಟ್ 2021, 19:49 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ನೇಮಕಗೊಂಡ, ಮೂವರು ಮಹಿಳಾ ನ್ಯಾಯಮೂರ್ತಿಗಳು ಸೇರಿದಂತೆ ಒಂಬತ್ತು ನ್ಯಾಯಮೂರ್ತಿಗಳು ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಕಟ್ಟಡದಲ್ಲಿರುವ ಸಭಾಂಗಣದಲ್ಲಿ ಆಗಸ್ಟ್ 30 ರಂದು ಬೆಳಿಗ್ಗೆ 10.30 ಕ್ಕೆ ಹೊಸ ನ್ಯಾಯಮೂರ್ತಿಗಳು ಮುಖ್ಯ ನ್ಯಾಯಮೂರ್ತಿಗಳಿಂದ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿಂದೆ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಾಲಯದ ಕೊಠಡಿಯಲ್ಲೇ ನಡೆಸಲಾಗುತ್ತಿತ್ತು.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ.ಎಸ್.ಓಕಾ, ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ, ವಿಕ್ರಮ್ ನಾಥ್, ಜೆ.ಕೆ. ಮಹೇಶ್ವರಿ, ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್, ಎಂ.ಎಂ.ಸುಂದ್ರೇಶ್, ಬೇಲಾ ತ್ರಿವೇದಿ ಮತ್ತು ಹಿರಿಯ ವಕೀಲ ಪಿ.ಎಸ್.ನರಸಿಂಹ ಅವರು ಪ್ರಮಾಣವಚನ ಸ್ವೀಕರಿಸುವರು. ಬಿ.ವಿ.ನಾಗರತ್ನ ಸೇರಿದಂತೆ ಈ ತಂಡದಲ್ಲಿ ನೇಮಕವಾದವರಲ್ಲಿ ಮೂವರು ಮುಖ್ಯ ನ್ಯಾಯಮೂರ್ತಿ ಹುದ್ದೆಗೇರುವ ಸಾಧ್ಯತೆ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT