ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ತಿ ಹಕ್ಕು ಮೂಲಭೂತ ಹಕ್ಕಾಗಲಿ: ಸುಪ್ರೀಂ ಕೋರ್ಟ್

Last Updated 12 ಡಿಸೆಂಬರ್ 2021, 16:04 IST
ಅಕ್ಷರ ಗಾತ್ರ

ನವದೆಹಲಿ: ಬಡ್ತಿಯನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲಾಗದು. ಆದರೆ, ಬಡ್ತಿಗೆ ಪರಿಗಣಿಸಬೇಕು ಎಂಬುದು ಮೂಲಭೂತ ಹಕ್ಕಿನ ಸ್ವರೂಪ ಪಡೆಯುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ವಿಕ್ರಂ ನಾಥ್, ಬಿ.ವಿ.ನಾಗರತ್ನ ಅವರಿದ್ದ ಪೀಠವು, ಸುಪ್ರೀಂ ಕೋರ್ಟ್ ಆಗಿಂದಾಗ್ಗೆ ಬಡ್ತಿ ಹಕ್ಕನ್ನು ಮೂಲಭೂತ ಹಕ್ಕಾಗಿ ಪರಿಗಣಿಸಬೇಕು ಎಂದು ಒತ್ತಿ ಹೇಳಿದೆ ಎಂದಿದೆ.

‘ಈ ಹಿಂದೆಯೂಅಜಿತ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌, ವ್ಯಕ್ತಿಯು ಬಡ್ತಿಗೆ ಅರ್ಹನಾಗಿ, ಅಗತ್ಯ ಮಾನದಂಡಗಳನ್ನು ಪೂರೈಸಿದ್ದಾಗಿಯೂ ಬಡ್ತಿಗೆ ಪರಿಗಣಿಸದೇ ಇದ್ದರೆ, ಅದು ಆತನ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಸ್ಪಷ್ಟವಾಗಿ ಹೇಳಿತ್ತು’ ಎಂದು ಪೀಠ ಉಲ್ಲೇಖಿಸಿದೆ.

ಸಣ್ಣ ನೀರಾವರಿ ಇಲಾಖೆಯಲ್ಲಿ ಕೆಲ ಕಿರಿಯ ಎಂಜಿನಿಯರ್‌ಗಳಿಗೆ ರಾಜ್ಯ ಸರ್ಕಾರ ಬಡ್ತಿ ನಿರಾಕರಿಸಿದೆ ಎಂದು ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾ ಮಾಡಿ ಅಲಹಾಬಾದ್ ಹೈಕೋರ್ಟ್‌ ಡಿಸೆಂಬರ್ 4, 2019ರಲ್ಲಿ ನೀಡಿದ್ದ ಆದೇಶವನ್ನು ಅನೂರ್ಜಿತಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT