ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸ್ವಾಧೀನ ಕಾಯ್ದೆ–2013 ಬಿಡಿಎಗೆ ಅನ್ವಯಿಸದು: ’ಸುಪ್ರೀಂ‘

Last Updated 20 ಜನವರಿ 2022, 19:30 IST
ಅಕ್ಷರ ಗಾತ್ರ

ನವದೆಹಲಿ: ಅಧಿಕ ಪರಿಹಾರ ನೀಡಲು ಅವಕಾಶ ನೀಡುವ ಭೂಸ್ವಾಧೀನ ಕಾಯ್ದೆ–2013, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಯಡಿ (ಬಿಡಿಎ) ಮಾಡಲಾದ ಭೂ ಸ್ವಾಧೀನಕ್ಕೆ ಅನ್ವಯವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಎಸ್‌.ಅಬ್ದುಲ್‌ ನಜೀರ್‌ ಹಾಗೂ ಸಂಜೀವ್‌ ಖನ್ನಾ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿ, ಈ ವಿಷಯವಾಗಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ವಜಾಗೊಳಿಸಿತು.

ಬೆಂಗಳೂರು ನಗರದಲ್ಲಿ 116 ಕಿ.ಮೀ. ಉದ್ದದ ಪೆರಿಫೆರಲ್‌ ವರ್ತುಲ ರಸ್ತೆ (ಪಿಆರ್‌ಆರ್‌) ನಿರ್ಮಾಣಕ್ಕಾಗಿ ಬಿಡಿಎ ಭೂ ಸ್ವಾಧೀನಪಡಿಸಿಕೊಂಡಿತ್ತು. ಈ ಸ್ವಾಧೀನ ಪ್ರಕ್ರಿಯೆಗೂ ಭೂಸ್ವಾಧೀನ ಕಾಯ್ದೆ–2013 ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್‌ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಬಿಡಿಎ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT