ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ರಾಸ್‌ ಹೈಕೋರ್ಟ್‌ನ ‘ಅನಗತ್ಯ’ ಅಭಿಪ್ರಾಯ ರದ್ದುಪಡಿಸಿದ ‘ಸುಪ್ರೀಂ’

Last Updated 24 ಸೆಪ್ಟೆಂಬರ್ 2021, 22:29 IST
ಅಕ್ಷರ ಗಾತ್ರ

ನವದೆಹಲಿ:ವೈದ್ಯಕೀಯ ಕಾಲೇಜು ಗಳ ಅಖಿಲ ಭಾರತ ಕೋಟಾದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯುಎಸ್‌)ಶೇ 10ರಷ್ಟು ಮೀಸಲಾತಿ ನೀಡುವ ಮುನ್ನ ಸುಪ್ರೀಂ ಕೋರ್ಟ್‌ನ ಅನು ಮತಿಯನ್ನು ಕೇಂದ್ರವು ಪಡೆದುಕೊಳ್ಳಬೇಕು ಎಂದು ಮದ್ರಾಸ್‌ ಹೈಕೋರ್ಟ್‌ ನೀಡಿದ್ದ ನಿರ್ದೇಶನವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ರದ್ದುಪಡಿಸಿದೆ.

ಹೈಕೋರ್ಟ್‌ ಆಗಸ್ಟ್‌ 25ರಂದು ನೀಡಿದ್ದ ಪೂರ್ಣ ಆದೇಶವನ್ನು ರದ್ದು ಮಾಡುವುದಿಲ್ಲ. ಮೀಸಲಾತಿ ನೀಡಿಕೆಗೆ ಮುನ್ನ ಸುಪ್ರೀಂ ಕೋರ್ಟ್‌ನ ಅನುಮತಿ ಪಡೆದುಕೊಳ್ಳಬೇಕು ಎಂಬ ಅಂಶವನ್ನು ಮಾತ್ರ ರದ್ದು ಮಾಡಲಾಗಿದೆ ಎಂದು ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌ ಮತ್ತು ಬಿ.ವಿ. ನಾಗರತ್ನ ಅವರ ಪೀಠವು ಸ್ಪಷ್ಟಪಡಿಸಿದೆ.

ತಮಿಳುನಾಡಿನ ಅಡಳಿತಾ ರೂಢ ಡಿಎಂಕೆ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯಲ್ಲಿ ಹೈಕೋರ್ಟ್‌ ಈ ಅಭಿಪ್ರಾಯ ವ್ಯಕ್ತ ಪಡಿ ಸುವ ಅಗತ್ಯ ಇರಲಿಲ್ಲ. ಹೈಕೋರ್ಟ್‌ ವ್ಯಾಪ್ತಿ ಮೀರಿ ವರ್ತಿಸಿದೆ.ನ್ಯಾಯಾಂಗ ನಿಂದನೆಯ ಅರ್ಜಿ ಪರಿಶೀಲಿಸುವಾಗ ಆದೇಶದ ಪಾಲನೆ ಆಗಿದೆಯೇ ಇಲ್ಲವೇ ಎಂಬುದನ್ನು ಮಾತ್ರನೋಡಬೇಕು ಎಂದು ಪೀಠವು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT