ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ | ಬಿಎಸ್‌ಪಿ ಶಾಸಕರ ಪ್ರಕರಣ: ಮಧ್ಯಂತರ ಆದೇಶಕ್ಕೆ ‘ಸುಪ್ರೀಂ’ ನಕಾರ

Last Updated 13 ಆಗಸ್ಟ್ 2020, 12:55 IST
ಅಕ್ಷರ ಗಾತ್ರ

ನವದೆಹಲಿ: ಬಿಎಸ್‌ಪಿಯ ಆರು ಶಾಸಕರು ರಾಜಸ್ಥಾನದಲ್ಲಿ ಕಾಂಗ್ರೆಸ್‌ ಜೊತೆ ವಿಲೀನಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಈ ವಿಚಾರದಲ್ಲಿ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಗುರುವಾರ ತಿಳಿಸಿದೆ.

‘ಈ ಪ್ರಕರಣವನ್ನು ಹೈಕೋರ್ಟ್‌ ವಿಚಾರಣೆ ನಡೆಸುತ್ತಿದ್ದು, ಈ ಹಂತದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ’ ಎಂದು ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ, ಬಿ.ಆರ್.ಗವಾಯಿ ಮತ್ತು ಕೃಷ್ಣ ಮೂರ್ತಿ ಅವರಿದ್ದ ನ್ಯಾಯಪೀಠವು ತಿಳಿಸಿತು.

ಶಾಸಕರ ವಿಲೀನಕ್ಕೆ 2019 ಸೆ.18ರಂದು ಅನುಮತಿ ನೀಡಿದ್ದ ವಿಧಾನಸಭೆ ಅಧ್ಯಕ್ಷರ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಮದನ್‌ ದಿಲಾವರ್‌ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಭಾಧ್ಯಕ್ಷ ಸಿ.ಪಿ.ಜೋಶಿ ಅವರ ಆದೇಶಕ್ಕೆ ತಡೆ ನೀಡಬೇಕು ಎಂದು ದಿಲಾವರ್‌ ಕೋರಿದ್ದರು. ವಿಚಾರಣೆಯನ್ನು ಪೀಠ ಸೋಮವಾರಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT