ಬುಧವಾರ, ಆಗಸ್ಟ್ 4, 2021
22 °C
ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ

ಹೈಕೋರ್ಟ್‌ಗಳು ನಡೆಸುತ್ತಿರುವ ವಿಚಾರಣೆಗೆ ತಡೆ ನೀಡಲು ‘ಸುಪ್ರೀಂ’ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಡಿಜಿಟಲ್ ಸುದ್ದಿ ಮಾಧ್ಯಮಗಳ ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ವಿವಿಧ ಹೈಕೋರ್ಟ್‌ಗಳಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಗುರುವಾರ ನಿರಾಕರಿಸಿತು.

ನ್ಯಾಯಮೂರ್ತಿ ಎ.ಎಂ.ಖಾನ್ವೀಲ್ಕರ್‌ ನೇತೃತ್ವದ ನ್ಯಾಯಪೀಠ, ‘ಇದೇ ವಿಷಯ ಕುರಿತ ಬಾಕಿ ಇರುವ ಪ್ರಕರಣಗಳೊಂದಿಗೆ ಈ ಅರ್ಜಿಯನ್ನೂ ಸೇರಿಸಲಾಗುವುದು. ಜುಲೈ 16ರಂದು ವಿಚಾರಣೆ ನಡೆಸಲು, ಸಂಬಂಧಿಸಿದ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ಮಂಡಿಸುವಂತೆ ನಿರ್ದೇಶನ ನೀಡಲಾಗುವುದು’ ಎಂದು ಹೇಳಿತು.

ದೆಹಲಿ, ಕೇರಳ ಹಾಗೂ ಇತರ ಹೈಕೋರ್ಟ್‌ಗಳಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಯುತ್ತಿದೆ. ಈ ಎಲ್ಲ ಅರ್ಜಿಗಳನ್ನು ಸುಪ್ರೀಂಕೋರ್ಟ್‌ಗೆ ವರ್ಗಾಯಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿತ್ತು. ಆದರೆ, ನ್ಯಾಯಪೀಠ ಈ ಕುರಿತು ಯಾವುದೇ ಆದೇಶ ಹೊರಡಿಸಲಿಲ್ಲ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಐಟಿ ಕಾಯ್ದೆ, ‘ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು 2021ರ ಸಿಂಧುತ್ವ ಪ್ರಶ್ನಿಸಿ ಹಲವಾರು ಡಿಜಿಟಲ್‌ ಸುದ್ದಿ ಮಾಧ್ಯಮ ಸಂಸ್ಥೆಗಳು ಅರ್ಜಿ ಸಲ್ಲಿಸಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು