ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ ವಿರೋಧಿ ಪ್ರತಿಭಟನೆ: ಅಖಿಲ್‌ ಗೊಗೊಯಿಗೆ ಜಾಮೀನು ನಿರಾಕರಣೆ

Last Updated 11 ಫೆಬ್ರುವರಿ 2021, 7:03 IST
ಅಕ್ಷರ ಗಾತ್ರ

ನವದೆಹಲಿ: ಅಸ್ಸಾಂನಲ್ಲಿ ನಡೆದ ಸಿಎಎ ವಿರೋಧಿ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿರುವ ಕಾರ್ಯಕರ್ತ ಅಖಿಲ್‌ ಗೊಗೊಯಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್‌ ಗುರುವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಎನ್‌.ವಿ ರಮಣ, ಸೂರ್ಯ ಕಾಂತ್‌ ಮತ್ತು ಅನಿರುದ್ಧ್‌ ಬೋಸ್‌ ಅವರನ್ನೊಳಗೊಂಡ ಪೀಠವು ಅನಿಲ್‌ ಗೊಗೊಯಿ ಅವರ ಜಾಮೀನು ಅರ್ಜಿ ತಿರಸ್ಕರಿಸಿದ್ದು, ‘ಈ ಹಂತದಲ್ಲಿ ಜಾಮೀನು ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಹೇಳಿದೆ.

ಈ ಪ್ರಕರಣ ಸಂಬಂಧ ವಿಚಾರಣೆ ಆರಂಭಗೊಂಡ ಬಳಿಕ ಅರ್ಜಿದಾರ ಮತ್ತೊಮ್ಮೆ ಸುಪ್ರೀಂಕೋರ್ಟ್‌ಗೆ ಜಾಮೀನು ಅರ್ಜಿಯನ್ನು ಸಲ್ಲಿಸಬಹುದು ಎಂದು ಪೀಠವು ಅಖಿಲ್‌ ಪರ ವಕೀಲರಾದ ರುನಮೋನಿ ಭುಯಾನ್ ಅವರಿಗೆ ತಿಳಿಸಿದೆ.

ಜನವರಿ 7ರಂದು ಅಖಿಲ್‌ ಗೊಗೊಯಿ ಅವರು ಜಾಮೀನು ನೀಡಬೇಕು ಎಂದು ಕೋರಿ ಗುವಾಹಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ಈ ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಗೊಗೊಯಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT