ನೀಟ್, ಜೆಇಇ ಪರೀಕ್ಷೆ: 6 ರಾಜ್ಯಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್–19 ಪಿಡುಗಿನ ಸಂದರ್ಭದಲ್ಲೇ ನೀಟ್ ಹಾಗೂ ಜೆಇಇ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದ ತೀರ್ಪನ್ನು ಪುನರ್‌ಪರಿಶೀಲಿಸುವಂತೆ ಕೋರಿ ಆರು ರಾಜ್ಯಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ ಎಂದು ಆಗಸ್ಟ್ 17ರಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿತ್ತು. ಇದನ್ನು ಪುನರ್‌ಪರಿಶೀಲಿಸಬೇಕು ಎಂದು ಪಶ್ಚಿಮ ಬಂಗಾಳ, ಜಾರ್ಖಂಡ್, ರಾಜಸ್ಥಾನ, ಚತ್ತೀಸ್‌ಗಢ, ಪಂಜಾಬ್ ಹಾಗೂ ಮಹಾರಾಷ್ಟ್ರ ಮನವಿ ಸಲ್ಲಿಸಿದ್ದವು.
ಇದನ್ನೂ ಓದಿ: ನೀಟ್, ಜೆಇಇ: ‘ಸುಪ್ರೀಂ’ ತೀರ್ಪು ಪುನರ್‌ಪರಿಶೀಲನೆಗೆ ಅರ್ಜಿ
Supreme Court refuses to entertain the review petition filed by ministers of six states, seeking review of the court's August 17 order to conduct NEET-UG and JEE (Mains) examinations. pic.twitter.com/3kKLm5VX3n
— ANI (@ANI) September 4, 2020
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.