ಮಂಗಳವಾರ, ಮಾರ್ಚ್ 28, 2023
21 °C

ಬಿಬಿಎಂಪಿ ಚುನಾವಣೆ ವಿವಾದ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಸೂಚಿಸಿರುವ ಹೈಕೋರ್ಟ್ ತೀರ್ಪಿನ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಗೆ ನೀಡಿದೆ.

ಬಿಬಿಎಂಪಿಯ ಐದು ವರ್ಷಗಳ ಅಧಿಕಾರ ಅವಧಿ ಕಳೆದ ವರ್ಷದ ಸೆಪ್ಟಂಬರ್‌ಗೆ ಅಂತ್ಯಗೊಂಡಿದ್ದು, ನಂತರ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಿದ್ದರಿಂದ, ತುರ್ತು ಸಂದರ್ಭ ಎದುರಾಗಿತ್ತು ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಲಾಗಿತ್ತು.  

’ಈ ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ನನ್ನ ಕೊಠಡಿಗೆ ಕಳುಹಿಸಿ, ಅದನ್ನು ನಾವು ಪರಿಶೀಲಿಸುತ್ತೇವೆ’ ಎಂದು ಮುಖ್ಯ ನ್ಯಾಯಮೂರ್ತಿ ತಿಳಿಸಿದರು. ಇದಕ್ಕೂ ಮೊದಲು ವಕೀಲ ನಿಜಾಮ್‌ ಪಾಶಾ ಅವರು, ಹಿಂದಿನ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ (ಈಗ ನಿವೃತ್ತ) ನೇತೃತ್ವದ ಪೀಠವು ಡಿಸೆಂಬರ್ 4, 2020ರಂದು ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಿದ್ದ ವಿಷಯವನ್ನು ಪೀಠದ ಗಮನಕ್ಕೆ ತಂದರು.

ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಮೂರನೇ ತಿದ್ದುಪಡಿ ಕಾಯಿದೆಯಲ್ಲಿ (2020) ಉಲ್ಲೇಖಿಸಿರುವಂತೆ 243 ಸ್ಥಾನಗಳ ಬದಲಿಗೆ ಸೆಪ್ಟೆಂಬರ್ 23, 2020ರ ಪುನರ್‌ ವಿಂಗಡಣೆ ಅಧಿಸೂಚನೆಯ ಪ್ರಕಾರ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು