ಭಾನುವಾರ, ಏಪ್ರಿಲ್ 2, 2023
33 °C
ಹರಿಯಾಣ ಹೈ ಕೋರ್ಟ್‌ ನೀಡಿದ ತೀರ್ಪು ಪರಿಶೀಲನೆ ಮಾಡಲಿರುವ ಸುಪ್ರೀಂ

ಪ್ರೌಢಾವಸ್ಥೆ ತುಂಬಿದ ಮುಸ್ಲಿಂ ಹೆಣ್ಮಕ್ಕಳ ವಿವಾಹ: ವಿಚಾರಣೆಗೆ ಸುಪ್ರೀಂ ಅಸ್ತು

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: 18 ವರ್ಷ ತುಂಬದೇ ಇದ್ದರೂ, ಪ್ರೌಢಾವಸ್ಥೆಗೆ ಬಂದ ಮುಸ್ಲಿಂ ಹೆಣ್ಮಕ್ಕಳು ವಿವಾಹವಾಗಬಹುದು ಎಂದು ಹರಿಯಾಣ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿದೆ.

ಹರಿಯಾಣ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಹರಿಯಾಣ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.

ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿ ನರಸಿಂಹ ಅವರಿದ್ದ ಪೀಠದ ಮುಂದೆ ಈ ಅರ್ಜಿ ಬಂದಿದ್ದು, ಹರಿಯಾಣ ಸರ್ಕಾರ ಹಾಗೂ ಇನ್ನಿತರರಿಗೆ ನೋಟಿಸ್‌ ಜಾರಿ ಮಾಡಿದೆ. 

ಅಲ್ಲದೇ ವಕೀಲ ರಾಜಶೇಖರ್‌ ರಾವ್‌ ಅವರನ್ನು ಅಮಿಕಸ್‌ ಕ್ಯೂರಿಯಾಗಿ ನೇಮಕ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು