ನವದೆಹಲಿ: ಗುಜರಾತ್‌ನ ಮೊರ್ಬಿಯಲ್ಲಿ ಸಂಭವಿಸಿರುವ ತೂಗುಸೇತುವೆ ದುರಂತಕ್ಕೆಸಂಬಂಧಿಸಿದಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

ಮೊರ್ಬಿ ತೂಗುಸೇತುವೆ ಮುರಿದುಬಿದ್ದ ಪ್ರಕರಣದ ವಿಚಾರಣೆ ಪ್ರಾರಂಭಿಸಲುಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ ಸಮಿತಿಯನ್ನು ರಚಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿವಕೀಲ ವಿಶಾಲ್ ತಿವಾರಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆಯನ್ನುನ್ಯಾಯಾಲಯವುನವೆಂಬರ್ 14ರಂದು ಕೈಗೆತ್ತಿಕೊಳ್ಳಲಿದೆ.

ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಭಾನುವಾರ (ಅಕ್ಟೋಬರ್ 30 ರಂದು) ಸಂಜೆ ಮುರಿದು ಬಿದ್ದಿತ್ತು.ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 136ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವವರ ಶೋಧಕಾರ್ಯ ಮುಂದುವರಿದಿದೆ.

ಇದನ್ನೂ ಓದಿ:ಗುಜರಾತ್ ತೂಗುಸೇತುವೆ ದುರಂತಕ್ಕೆ ಮರುಗಿದ ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ

ಈ ಸಂಬಂಧ ಮೊರ್ಬಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರವೂ ತನಿಖಾ ತಂಡವನ್ನು ರಚಿಸಿದೆ.

ಈವರೆಗೆ ಒಟ್ಟು 136 ಶವಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಮೃತರಲ್ಲಿ 50 ಮಕ್ಕಳು ಮತ್ತು 40 ಮಹಿಳೆಯರು ಸೇರಿದ್ದಾರೆ. ಒಟ್ಟು 170 ಜನರನ್ನು ರಕ್ಷಿಸಲಾಗಿದೆ. ಅವರಿಗೆ ಮೊರ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡ ಹಲವರು ಮನೆಗೆ ಮರಳಿದ್ದಾರೆ. ಅವಘಡದಲ್ಲಿ ಇನ್ನೂ ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೊರ್ಬಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಇವನ್ನೂ ಓದಿ
*ಗುಜರಾತ್ತೂಗುಸೇತುವೆ ದುರಂತ: ಮೊರ್ಬಿಗೆಇಂದು ಪ್ರಧಾನಿ ಮೋದಿ ಭೇಟಿ
*ಗುಜರಾತ್‌ನ ಮೊರ್ಬಿ ತೂಗುಸೇತುವೆ ದುರಂತದಲ್ಲಿ ಸತ್ತವರ ಸಂಖ್ಯೆ 136ಕ್ಕೆ ಏರಿಕೆ
*ಗುಜರಾತ್ | 'ಫಿಟ್ನೆಸ್' ಪ್ರಮಾಣಪತ್ರವಿಲ್ಲದೆ ತೂಗುಸೇತುವೆ ಸಂಚಾರಕ್ಕೆ ಮುಕ್ತ!
*ಮಚು ನದಿ ಕರಾಳ ಇತಿಹಾಸ: 1979ರಲ್ಲಿ ಅಣೆಕಟ್ಟು ಸ್ಫೋಟ, ಈಗ ಸೇತುವೆ ದುರಂತ
*ಗುಜರಾತ್| ಮೊರ್ಬಿ ತೂಗು ಸೇತುವೆ ದುರಂತ: 9 ಮಂದಿಯ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.