ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈಜ ಶಿವಸೇನಾ ಯಾರದ್ದು?: ಸೆ. 27ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

Last Updated 7 ಸೆಪ್ಟೆಂಬರ್ 2022, 6:17 IST
ಅಕ್ಷರ ಗಾತ್ರ

ನವದೆಹಲಿ: ನೈಜ ಶಿವಸೇನಾದ ಹಕ್ಕುದಾರರು ಯಾರೆಂಬ ಬಗ್ಗೆ ಚುನಾವಣಾ ಆಯೋಗ ನಿರ್ಧರಿಸಬಹುದೇ ಎಂಬುದರ ಕುರಿತು ಸೆಪ್ಟೆಂಬರ್ 27ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

‘ತಮ್ಮ ಬಣವನ್ನೇ ನಿಜವಾದ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡಬೇಕು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಉದ್ಧವ್ ಠಾಕ್ರೆ ಬಣ ಕೋರ್ಟ್ ಮೆಟ್ಟಿಲೇರಿತ್ತು.

ಶಿಂದೆ ಬಣ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಆಗಸ್ಟ್ 4ರಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಶಿಂದೆ ಬಣದ ಅರ್ಜಿಯ ಕುರಿತ ನೋಟಿಸ್‌ಗೆ ಉತ್ತರಿಸಲು ಉದ್ಧವ್ ಠಾಕ್ರೆ ನೇತೃತ್ವದ ಬಣ ಸಮಯ ಕೋರಿದರೆ, ಆ ಮನವಿಯನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT