ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧದ ಅರ್ಜಿ ವಿಚಾರಣೆ ಇಂದು

Last Updated 15 ನವೆಂಬರ್ 2020, 21:17 IST
ಅಕ್ಷರ ಗಾತ್ರ

ನವದೆಹಲಿ: ಆಂಧ್ರಪ್ರದೇಶಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳು ನ್ಯಾಯಯುತವಾಗಿ ಇತ್ಯರ್ಥಪಡಿಸುತ್ತಿಲ್ಲ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗೆ ಬಹಿರಂಗ ಪತ್ರ ಬರೆದಿದ್ದರ ವಿರುದ್ಧ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಆರಂಭಿಸಲಿದೆ.

‘ದೇಶದ ಅತ್ಯುನ್ನತ ನ್ಯಾಯಾಲಯದ ವಿರುದ್ಧ ಸುಳ್ಳು, ರಾಜಕೀಯ ಉದ್ದೇಶದ ಹೇಳಿಕೆಗಳನ್ನು ನೀಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ತಮ್ಮ ಸ್ಥಾನ ಮತ್ತು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡಬೇಕು’ ಎಂದು ಸುನಿಲ್ ಕುಮಾರ್ ಸಿಂಗ್, ಜಿ.ಎಸ್‌.ಮಣಿ ಎಂಬ ವಕೀಲರು ಅರ್ಜಿ ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲುಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರು ಅಸಮ್ಮತಿ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT