ಗುರುವಾರ , ಸೆಪ್ಟೆಂಬರ್ 16, 2021
24 °C

97ನೇ ತಿದ್ದುಪಡಿ ಇಂದು ‘ಸುಪ್ರಿಂ’ ತೀರ್ಪು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸಂವಿಧಾನದ 97ನೇ ತಿದ್ದುಪಡಿಗೆ ಸಂಬಂಧಿಸಿದಂತೆ ಗುಜರಾತ್‌ ಹೈಕೋರ್ಟ್‌ 2013ರಲ್ಲಿ ನೀಡಿರುವ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್‌ ಮಂಗಳವಾರ ತೀರ್ಪು ನೀಡಲಿದೆ.

ರಾಜ್ಯಪಟ್ಟಿಯಲ್ಲಿರುವ ಸಹಕಾರಿ ಕ್ಷೇತ್ರದ ಸೊಸೈಟಿಗಳಿಗೆ ಸಂಬಂಧಿಸಿದಂತೆ ಕಾನೂನು ರೂಪಿಸಲು ಸಂಸತ್‌ಗೆ ಅವಕಾಶ ಇಲ್ಲ  ಎಂದು ತಿಳಿಸಿದ್ದ ಗುಜರಾತ್‌ ಹೈಕೋರ್ಟ್‌ ತಿದ್ದುಪಡಿಯ ಕೆಲವು ಅಂಶಗಳನ್ನು ತಿರಸ್ಕರಿಸಿತ್ತು.

ಹೈಕೋರ್ಟ್‌ ಆದೇಶದ ಪರ ಮತ್ತು ವಿರುದ್ಧ ಹಲವು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಜುಲೈ 8ರಂದು ತನ್ನ ತೀರ್ಪು ಕಾಯ್ದಿರಿಸಿತ್ತು.

ಸಹಕಾರಿ ಸೊಸೈಟಿಗಳ ಪರಿಣಾಮಕಾರಿ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಳ್ಳಲಾಗಿದ್ದ ಸಂವಿಧಾನದ 97ನೇ ತಿದ್ದುಪಡಿಗೆ ಸಂಸತ್‌ 2011ರ ಡಿಸೆಂಬರ್‌ನಲ್ಲಿ ಅನುಮೋದನೆ ನೀಡಿತ್ತು. ನಂತರ, 2012ರ ಫೆಬ್ರುವರಿ 15ರಿಂದ ಜಾರಿಗೊಳಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು