ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಎಸ್‌ಇ, ಸಿಬಿಎಸ್‌ಇಯ 12ನೇ ತರಗತಿಗೆ ಮೌಲ್ಯಮಾಪನ ಯೋಜನೆ ಎತ್ತಿಹಿಡಿದ ಸುಪ್ರೀಂ

ಅಕ್ಷರ ಗಾತ್ರ

ನವದೆಹಲಿ: ಪರೀಕ್ಷೆಗಳನ್ನು ರದ್ದುಗೊಳಿಸುವ ಸಿಬಿಎಸ್‌ಇ ಮತ್ತು ಐಸಿಎಸ್‌ಇ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಪರೀಕ್ಷೆ ಬದಲಿಗೆ ವಿದ್ಯಾರ್ಥಿಗಳ ಮೌಲ್ಯಮಾಪನ ಮಾಡಲು ಮಂಡಳಿಗಳು ಹೊರತಂದಿರುವ ಮೌಲ್ಯಮಾಪನ ಯೋಜನೆಗೆ ನ್ಯಾಯಾಲಯ ಅನುಮತಿ ನೀಡಿದೆ.

‘ಸಿಬಿಎಸ್ಇ ಮತ್ತು ಐಸಿಎಸ್ಇ ಪ್ರಸ್ತಾಪಿಸಿರುವ ಯೋಜನೆಯಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ನಾವು ಭಾವಿಸುತ್ತೇವೆ. ಇದು ಎಲ್ಲಾ ವಿದ್ಯಾರ್ಥಿಗಳ ಕಾಳಜಿಯನ್ನು ಗಣನೆಗೆ ತೆಗೆದುಕೊಳ್ಳುತ್ತದೆ’ ಎಂದು ನ್ಯಾಯಾಲಯ ಹೇಳಿದೆ.

ಕೋವಿಡ್ ವ್ಯಾಪಕವಾಗಿ ಹರಡುತ್ತಿದ್ದ ಕಾರಣ, ಜೂನ್ 1ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 12ನೇ ತರಗತಿ ಪರೀಕ್ಷೆ ರದ್ದು ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT