ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ: ಅಪರಾಧಿ ಬಂಧಿಸುವ ಇಡಿ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಅಕ್ಷರ ಗಾತ್ರ

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌) ಅಡಿಯಲ್ಲಿ ವಿಧಿಸಲಾಗಿರುವ ನಿಬಂಧನೆ ಮತ್ತು ಆರೋಪಿಗಳನ್ನು ಬಂಧಿಸುವ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಜಾರಿ ನಿರ್ದೇಶನಾಲಯದ ಅಧಿಕಾರ ವ್ಯಾಪ್ತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪಿಎಂಎಲ್‌ಎ ಅಡಿ ದಾಖಲಾಗಿರುವ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ತನಿಖೆಗೆ ಪೂರಕವಾಗಿ ಆರೋಪಿಗಳ ಆಸ್ತಿ, ಮನೆ ಮತ್ತು ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಬಹುದು ಎಂದು ಹೇಳಿದೆ.

ಅಲ್ಲದೆ, ಕಾಯ್ದೆ ಅಡಿ ಬಂಧನ ಮತ್ತು ಆಸ್ತಿ, ನಗದು ವಶಪಡಿಸಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT