ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಹೆಚ್ಚಳ: ನಾಳೆಯಿಂದ ವರ್ಚುವಲ್ ಆಗಿ ನಡೆಯಲಿದೆ ಸುಪ್ರೀಂ ಕೋರ್ಟ್‌ ವಿಚಾರಣೆ

Last Updated 2 ಜನವರಿ 2022, 13:56 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ ರೂಪಾಂತರ ತಳಿ ಓಮೈಕ್ರಾನ್‌ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ವರ್ಚುವಲ್‌ ವ್ಯವಸ್ಥೆಯ ಮೂಲಕ ವಿಚಾರಣೆ ನಡೆಸಲು ನಿರ್ಧರಿಸಿದೆ.

ನಾಳೆಯಿಂದ ಎರಡು ವಾರಗಳ ವರೆಗೂ ಸುಪ್ರೀಂ ಕೋರ್ಟ್‌ ಎಲ್ಲ ಪ್ರಕರಣಗಳ ವಿಚಾರಣೆಯನ್ನು ವರ್ಚುವಲ್‌ ವ್ಯವಸ್ಥೆಯಲ್ಲಿ ನಡೆಸಲಿದೆ. ಈ ಕುರಿತು ಸುಪ್ರೀಂ ಕೋರ್ಟ್‌ನ ರೆಜಿಸ್ಟ್ರಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೆಹಲಿಯಲ್ಲಿ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 3,194 ಹೊಸ ಪ್ರಕರಣಗಳು ದಾಖಲಾಗಿವೆ. ಭಾನುವಾರ ದೆಹಲಿಯಲ್ಲಿ ಕೋವಿಡ್‌ ದೃಢ ಪ್ರಮಾಣವು ಶೇಕಡ 4.59ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯ ಪ್ರಕಟಣೆಯ ಪ್ರಕಾರ, ನಗರದಲ್ಲಿ ಕೋವಿಡ್‌ ಕಂಟೈನ್ಮೆಂಟ್‌ ವಲಯಗಳ ಸಂಖ್ಯೆ 1,621ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT