ಗುರುವಾರ , ಮೇ 13, 2021
24 °C

ರಣದೀಪ್ ಸಿಂಗ್ ಸುರ್ಜೇವಾಲಾ, ಹರ್‌ಸಿಮ್ರತ್‌ ಕೌರ್‌ಗೆ ಕೋವಿಡ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಕಾಂಗ್ರೆಸ್‌ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಶಿರೋಮಣಿ ಅಕಾಲಿ ದಳ ನಾಯಕಿ ಹರ್‌ಸಿಮ್ರತ್ ಕೌರ್ ಬಾದಲ್ ಅವರಿಗೆ ಕೋವಿಡ್‌ ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸುರ್ಜೇವಾಲಾ, ‘ನನಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ. ಕಳೆದ ಐದು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಪ್ರತ್ಯೇಕ ವಾಸಕ್ಕೆ ಒಳಗಾಗಿ ಮತ್ತು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಿ’ ಎಂದು ಅವರು ಮನವಿ ಮಾಡಿದ್ದಾರೆ.

ಇನ್ನೊಂದೆಡೆ ಕೇಂದ್ರದ ಮಾಜಿ ಸಚಿವೆ ಹರ್‌ಸಿಮ್ರತ್ ಕೌರ್ ಅವರು ಕೂಡ ತನಗೆ ಕೋವಿಡ್‌ ತಗುಲಿರುವುದಾಗಿ ಹೇಳಿದ್ದಾರೆ.

‘ನಾನು ಮನೆಯಲ್ಲೇ ಪ್ರತ್ಯೇಕವಾಗಿದ್ದೇನೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ಕೋವಿಡ್‌ ಪರೀಕ್ಷೆಯನ್ನು ಮಾಡಿಸಿಕೊಳ್ಳಿ’ ಎಂದು ಹರ್‌ಸಿಮ್ರತ್‌ ಕೋರಿದ್ದಾರೆ.

ಹರ್‌ಸಿಮ್ರತ್‌ ಅವರ ಗಂಡನಿಗೂ ಸೋಂಕು ತಗುಲಿತ್ತು. ಅವರು ಈಗ ಗುಣಮುಖರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು