ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ, ಇಡಿ ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಣೆಯ ಸುಗ್ರೀವಾಜ್ಞೆ ಪ್ರಶ್ನಿಸಿ ಅರ್ಜಿ

ಕಾಂಗ್ರೆಸ್‌ ಮುಖ್ಯ ವಕ್ತಾರ  ರಣದೀಪ್ ಸುರ್ಜೇವಾಲಾ ಸುಪ್ರೀಂ ಕೋರ್ಟ್‌ಗೆ ಅರ್ಜಿ
Last Updated 18 ನವೆಂಬರ್ 2021, 10:13 IST
ಅಕ್ಷರ ಗಾತ್ರ

ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಕೇಂದ್ರೀಯ ತನಿಖಾ ಸಂಸ್ಥೆಗಳ (ಸಿಬಿಐ) ಮುಖ್ಯಸ್ಥರ ಅಧಿಕಾರಾವಧಿಯನ್ನು ಎರಡರಿಂದ ಐದು ವರ್ಷಗಳಿಗೆ ವಿಸ್ತರಿಸಿಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗಳನ್ನು ಪ್ರಶ್ನಿಸಿ ಕಾಂಗ್ರೆಸ್‌ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಗುರುವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸುರ್ಜೇವಾಲಾ ಅವರು ಕೇಂದ್ರ ಸರ್ಕಾರ ನ. 14ರಂದು ಹೊರಡಿಸಿದ್ದ ಕೇಂದ್ರೀಯ ಜಾಗೃತ ಆಯೋಗ (ತಿದ್ದುಪಡಿ) ಸುಗ್ರೀವಾಜ್ಞೆ ಮತ್ತು ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಸುಗ್ರೀವಾಜ್ಞೆ ಮತ್ತು ಇ.ಡಿ, ಸಿಬಿಐ ಮುಖ್ಯಸ್ಥರು ಮತ್ತು ರಕ್ಷಣೆ, ಗೃಹ ಹಾಗೂ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ಅವಧಿಯನ್ನೂ ವಿಸ್ತರಿಸುವ ಕುರಿತು ಸಿಬ್ಬಂದಿ ಸಚಿವಾಲಯ ನ.15ರಂದು ಹೊರಡಿಸಿದ್ದ ಅಧಿಸೂಚನೆ ವಿರುದ್ಧವೂ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT