ಗುರುವಾರ , ಮಾರ್ಚ್ 30, 2023
24 °C

ಸುಶಾಂತ್ ಸಿಂಗ್ ಪ್ರಕರಣ: ಡ್ರಗ್ ಡೀಲರ್ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ನಟ ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್‌ ಡೀಲರ್‌ ಒಬ್ಬನನ್ನು ಮಾದಕವಸ್ತುಗಳ ನಿಯಂತ್ರಣ ಘಟಕ (ಎನ್‌ಸಿಬಿ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಬಂಧಿತನನ್ನು ಜೈದ್ ಎಂದು ಗುರುತಿಸಲಾಗಿದೆ. ಈತ ಮುಂಬೈನಲ್ಲಿ ನಡೆಯುವ ಐಶಾರಾಮಿ ಪಾರ್ಟಿಗಳಿಗೆ ಗಾಂಜಾ ಸೇರಿದಂತೆ ಇತರ ಮಾದಕವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಎಂದು ಗೊತ್ತಾಗಿದೆ. ಉತ್ತಮ ಗುಣಮಟ್ಟದ ಗಾಂಜಾವನ್ನು ಗ್ರಾಂಗೆ ₹5 ಸಾವಿರದಂತೆ ಮಾರುತ್ತಿದ್ದ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಸುಶಾಂತ್‌ಸಿಂಗ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಮತ್ತು ಇತರರ ವಿರುದ್ಧ ದಾಖಲಾದ ಮಾದಕವಸ್ತು ಪ್ರಕರಣದ ವಿಚಾರಣೆ ವೇಳೆ ದೊರೆತ ಪ್ರಮುಖ ಮಾಹಿತಿಗಳನ್ನು ಆಧರಿಸಿ ಈತನನ್ನು ಬಂಧಿಸಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂಬೈ ಮಹಾನಗರದ ಪಶ್ಚಿಮ ಭಾಗದಲ್ಲಿ ಮಾದಕವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಕಳೆದವಾರ ಎನ್‌ಸಿಬಿ ಅಧಿಕಾರಿಗಳು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಮಹಾರಾಷ್ಟ್ರ, ದೆಹಲಿ ಮತ್ತು ಗೋವಾದಲ್ಲಿರುವ ಇಂಥ ಮಾದಕವಸ್ತುಗಳ ಕಳ್ಳ ಸಾಗಣೆದಾರರ ಮೇಲೆ ನಿಗಾ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು