ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಶಾಂತ್‌ ಪ್ರಕರಣ: ರಿಯಾ ಚಕ್ರವರ್ತಿಗೆ ಅಕ್ಟೋಬರ್‌ 6ರವರೆಗೂ ನ್ಯಾಯಾಂಗ ಬಂಧನ

Last Updated 22 ಸೆಪ್ಟೆಂಬರ್ 2020, 9:49 IST
ಅಕ್ಷರ ಗಾತ್ರ

ಮುಂಬೈ: ಮಾದಕ ವಸ್ತು ನಿಯಂತ್ರಣ ಸಂಸ್ಥೆಯಿಂದ (ಎನ್‌ಸಿಬಿ) ಸೆಪ್ಟೆಂಬರ್‌ 9ರಂದು ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರ ನ್ಯಾಯಾಂಗ ಬಂಧನ ಅಕ್ಟೋಬರ್‌ 6ರ ವರೆಗೂ ವಿಸ್ತರಣೆಯಾಗಿದೆ.

ಮಾದಕ ದ್ರವ್ಯಗಳು ಮತ್ತು ಮಾನಸಿಕ ವ್ಯಸನ ಪದಾರ್ಥಗಳ (ಎನ್‌ಡಿಪಿಎಸ್‌) ಕಾಯ್ದೆ, 1985, ವಿಶೇಷ ಕೋರ್ಟ್‌ ರಿಯಾ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ಮಂಗಳವಾರ ಆದೇಶ ನೀಡಿದೆ. ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣದಲ್ಲಿ ಡ್ರಗ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ರಿಯಾ ಅವರನ್ನು ಬಂಧಿಸಲಾಗಿದೆ. ಸೆಪ್ಟೆಂಬರ್‌ 22ರವರೆಗೆ ನ್ಯಾಯಾಂಗ ಬಂಧನದಲ್ಲಿ ವಿಚಾರಣೆ ಎದುರಿಸಬೇಕೆಂದು ನ್ಯಾಯಾಲಯ ಹಿಂದೆ ಆದೇಶಿಸಿತ್ತು.

ಇದೇ ಪ್ರಕರಣದಲ್ಲಿ ಎನ್‌ಸಿಬಿಯಿಂದ ಬಂಧಿತರಾಗಿರುವ ರಿಯಾ ಸಹೋದರ ಶೋಯಿಕ್ ಮತ್ತು ರಿಯಾ ಅವರು ಜಾಮೀನು ಕೋರಿ ಮುಂಬೈ ಹೈ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ನಾಳೆ (ಸೆಪ್ಟೆಂಬರ್‌ 23ರಂದು) ಅರ್ಜಿ ವಿಚಾರಣೆ ನಡೆಯಲಿದೆ. ಈ ಬಗ್ಗೆ ರಿಯಾ ಪರ ವಕೀಲ ಸತೀಶ್‌ ಮಾನಶಿಂದೆ ಮಾಹಿತಿ ನೀಡಿದ್ದಾರೆ.

ಸುಶಾಂತ್ ಸಿಂಗ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಿ ಸುಶಾಂತ್ ಸಿಂಗ್ ತಂದೆ ಕೆ.ಕೆ.ಸಿಂಗ್ ಅವರು, ನಟಿ ರಿಯಾ ಮತ್ತು ಅವರ ಕುಟುಂಬದವರ ವಿರುದ್ಧ ಜುಲೈ 25ರಂದು ಪಟ್ನಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಪೊಲೀಸರು ರಿಯಾ, ಆಕೆಯ ಪೋಷಕರಾದ ಇಂದ್ರಜಿತ್, ಸಂಧ್ಯಾಚಕ್ರವರ್ತಿ, ಸಹೋದರ ಶೋಯಿಕ್ ಚಕ್ರವರ್ತಿ ಮತ್ತು ಸ್ಯಾಮುಯೆಲ್ ಮಿರಾಂಡಾ ಮತ್ತು ಶೃತಿ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಸಿಬಿಐ ಮತ್ತು ಎನ್‌ಸಿಬಿಯಿಂದ ತನಿಖೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT