ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಶಾಂತ್‌ ಸಾವು ಕುರಿತ ಏಮ್ಸ್‌ ವರದಿ: ತಮ್ಮ ತನಿಖೆ ಸಮರ್ಥಿಸಿಕೊಂಡ ಮುಂಬೈ ಪೊಲೀಸರು

Last Updated 4 ಅಕ್ಟೋಬರ್ 2020, 3:05 IST
ಅಕ್ಷರ ಗಾತ್ರ

ಮುಂಬೈ: ನಟ ಸುಶಾಂತ್‌ ಪ್ರಕರಣದಲ್ಲಿ ನಮ್ಮ ತನಿಖೆ ಸಮರ್ಥವಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸುಶಾಂತ್ ಸಿಂಗ್‌ ರಜಪೂತ್‌ ಅವರು ಆತ್ಮಹತ್ಯೆಯಿಂದ ಮೃತಪಟ್ಟಿದ್ದಾರೆ ಮತ್ತು ಅದು ಕೊಲೆ ಅಲ್ಲ ಎಂದು ಏಮ್ಸ್ ವೈದ್ಯಕೀಯ ಮಂಡಳಿ ಶನಿವಾರ ಹೇಳಿಕೆ ನೀಡಿತ್ತು.

ಏಮ್ಸ್‌ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮುಂಬೈ ಪೊಲೀಸ್‌ ಆಯುಕ್ತ ಪರಮ್ ವೀರ್‌ ಸಿಂಗ್, 'ಪಟ್ಟಭದ್ರ ಹಿತಾಸಕ್ತಿಗಳು ತನಿಖೆಯ ಬಗ್ಗೆ ಏನೂ ತಿಳಿಯದೆ ಮುಂಬೈ ಪೊಲೀಸರನ್ನು ಗುರಿಯಾಗಿಸಿಕೊಂಡರು' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

'ಮುಂಬೈ ಪೊಲೀಸರ ತನಿಖೆ ವೃತ್ತಿಪರವಾಗಿದೆ. ಶವಪರೀಕ್ಷೆ ನಡೆಸಿದ ಮುಂಬೈನ ಕೂಪರ್ ಆಸ್ಪತ್ರೆಯ ವೈದ್ಯರು ಸಹ ತಮ್ಮ ಕೆಲಸವನ್ನು ಸಮರ್ಪಕವಾಗಿ ಮಾಡಿದ್ದಾರೆ' ಎಂದು ಸಿಂಗ್‌ ತಿಳಿಸಿದ್ದಾರೆ. .

ಜೂ.14ರಂದು ಮುಂಬೈನ ಬಾಂದ್ರಾದಲ್ಲಿ ಇರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಸುಶಾಂತ್‌ ಸಿಂಗ್ ಮೃತದೇಹ ಪತ್ತೆಯಾಗಿತ್ತು. ನಟಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಕುಟುಂಬದ ವಿರುದ್ಧ ಸುಶಾಂತ್‌ ಸಿಂಗ್‌ ತಂದೆ ಕೆ.ಕೆ.ಸಿಂಗ್‌ ಅವರು ನೀಡಿದ್ದ ದೂರು ಆಧರಿಸಿ ಬಿಹಾರ ಪೊಲೀಸರು ತನಿಖೆ ನಡೆಸುತ್ತಿದ್ದರು. ನಂತರದಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐ ಹಸ್ತಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT