ಶನಿವಾರ, ಜೂನ್ 19, 2021
21 °C
ನಟ ಸುಶಾಂತ್‌ಸಿಂಗ್ ಸಾವು, ಡ್ರಗ್ಸ್‌ ಪ್ರಕರಣ

ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ, ರಕುಲ್‌ಗೆ ಎನ್‌ಸಿಬಿ ಸಮನ್ಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿಗೆ ಸಂಬಂಧಿಸಿದ ಡ್ರಗ್ಸ್‌ ಪ್ರಕರಣ ಕುರಿತ ತನಿಖೆಯನ್ನು ತೀವ್ರಗೊಳಿಸಿರುವ ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆ (ಎನ್‌ಸಿಬಿ), ಬಾಲಿವುಡ್‌ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್‌, ಸಾರಾ ಅಲಿಖಾನ್‌ ಹಾಗೂ ರಕುಲ್‌ ಪ್ರೀತ್‌ ಸಿಂಗ್‌ ಅವರಿಗೆ ಬುಧವಾರ ಸಮನ್ಸ್‌ ಜಾರಿ ಮಾಡಿದೆ.

ಈ ನಟಿಯರಿಗೆ ಸಮನ್ಸ್‌ ಜಾರಿ ಮಾಡಿರುವುದನ್ನು ಎನ್‌ಸಿಬಿಯ ಉಪನಿರ್ದೇಶಕ (ಕಾರ್ಯಾಚರಣೆ) ಕೆ.ಪಿ.ಎಸ್‌.ಮಲ್ಹೋತ್ರಾ ಖಚಿತಪಡಿಸಿದ್ದಾರೆ. ಆದರೆ, ಯಾವ ದಿನ ಇವರು ಎನ್‌ಸಿಬಿಯ ವಿಶೇಷ ತನಿಖಾ ತಂಡದ ಎದುರು ವಿಚಾರಣೆಗಾಗಿ ಹಾಜರಾಗಬೇಕು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸುಶಾಂತ್‌ ಸಿಂಗ್‌ ಗೆಳತಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋವಿಕ್‌ ಚಕ್ರವರ್ತಿ, ಜಯಾ ಸಹಾ ಹಾಗೂ ಕೆಲವು ಡ್ರಗ್ಸ್‌ ಪೆಡ್ಲರ್‌ಗಳು ಸೇರಿದಂತೆ 10ಕ್ಕೂ ಜನರನ್ನು ವಿಚಾರಣೆಗೆ ಒಳಪಡಿಸಿದ ಸಮಯದಲ್ಲಿ ಅವರು, ಈ ನಾಲ್ವರು ನಟಿಯರ ಹೆಸರುಗಳನ್ನು ಬಾಯ್ಬಿಟ್ಟಿದ್ದಾರೆ. ಇದೇ ಆಧಾರದಲ್ಲಿ ಅವರಿಗೆ ಸಮನ್ಸ್‌ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು