ಶುಕ್ರವಾರ, ಸೆಪ್ಟೆಂಬರ್ 25, 2020
28 °C

ಸುಶಾಂತ್ ಸ್ನೇಹಿತ, ಮನೆಗೆಲಸದವರನ್ನು ಮತ್ತೊಮ್ಮೆ ವಿಚಾರಣೆಗೊಳಪಡಿಸಿದ ಸಿಬಿಐ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕು ಗೊಳಿಸಿರುವ ಸಿಬಿಐ, ನಟನ ಜೊತೆ ವಾಸವಿದ್ದ ಆತನ ಗೆಳೆಯ, ಅಡುಗೆ ಕೆಲಸದವ ಹಾಗೂ ಮನೆಗೆಲಸದ ಸಹಾಯಕನನ್ನು ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ ಅಧಿಕಾರಿಗಳು ಮುಂಬೈನ ಸಾಂತಾಕ್ರೂಜ್‌ ಬಳಿಯಿರುವ ಡಿಆರ್‌ಡಿಒ ಅತಿಥಿ ಗೃಹದಲ್ಲಿ ಉಳಿದುಕೊಂಡಿದ್ದಾರೆ. ಇಲ್ಲಿಗೆ ಸುಶಾಂತ್‌ ಸ್ನೇಹಿತ ಸಿದ್ದಾರ್ಥ್‌ ಪಿಥಾನಿ, ಅಡುಗೆ ಕೆಲಸ ಮಾಡುತ್ತಿದ್ದ ನೀರಜ್‌ ಸಿಂಗ್‌ ಹಾಗೂ ಮನೆಗೆಲಸ ಮಾಡಿಕೊಂಡಿದ್ದ ದೀಪೇಶ್‌ ಸಾವಂತ್‌ ಇಂದು ಬೆಳಗ್ಗೆ ವಿಚಾರಣೆಗೆ ಹಾಜರಾಗಿದ್ದರು. ಮೂವರಿಂದ ಶುಕ್ರವಾರವೂ ಹೆಳಿಕೆಗಳನ್ನು ಪಡೆಯಲಾಗಿತ್ತು.

ರಜಪೂತ್‌ ಅವರ ಹಣಕಾಸು ವ್ಯವಹಾರದ ಬಗ್ಗೆ ಮಾಹಿತಿ ಸಂಗ್ರಹಿಸಲು ಚಾರ್ಟರ್ಡ್ ಅಕೌಂಟೆಂಟ್ ಅವರಿಗೂ ಇನ್ನೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎನ್ನಲಾಗಿದೆ.

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ನಟನ ಹಣಕಾಸು ವ್ಯವಹಾರ ನಿರ್ವಹಿಸುತ್ತಿದ್ದ ಚಾರ್ಟರ್ಡ್‌ ಅಕೌಂಟೆಂಟ್‌ ಅವರನ್ನು ಆಗಸ್ಟ್‌ 3 ರಂದು ವಿಚಾರಣೆಗೆ ಒಳಪಡಿಸಿದ್ದರು. ಅಗತ್ಯವಿದ್ದರೆ, ಮತ್ತೆ ತನಿಖೆಗೆ ಬರುವಂತೆ ಸೂಚಿಸುವುದಾಗಿ ನಿರ್ದೇಶನ ನೀಡಿದ್ದರು.

ನಟ ಸುಶಾಂತ್‌ ಜೂನ್‌ 14ರಂದು ಬಾಂದ್ರಾದಲ್ಲಿರುವ ನಿವಾಸದಲ್ಲಿ ಮೃತಪಟ್ಟಿದ್ದರು. ಜೂನ್ 25ರಂದು ಸುಶಾಂತ್ ತಂದೆ ಕೆ.ಕೆ ಸಿಂಗ್ ಅವರು ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು