ಶನಿವಾರ, ಆಗಸ್ಟ್ 20, 2022
21 °C

ಡ್ರಗ್ ಡೀಲ್: ಬಂಧಿತ ಸಾವಂತ್‌ ಸೆ.9ರವರೆಗೆ ಎನ್‌ಸಿಬಿ ಕಸ್ಟಡಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಬಾಲಿವುಡ್‌ ಡ್ರಂಗ್ಸ್‌ ದಂಧೆ ಪ್ರಕರಣದಲ್ಲಿ ಬಂಧಿಸಲಾಗಿರುವ ನಟ ಸುಶಾಂತ್ ಸಿಂಗ್ ಆಪ್ತ ಸಿಬ್ಬಂದಿ ದೀಪೇಶ್ ಸಾವಂತ್‌ನನ್ನು ಮುಂಬೈ ನ್ಯಾಯಾಲಯ ಸೆಪ್ಟೆಂಬರ್ 9ರವರೆಗೆ ಎನ್‌ಸಿಬಿ ಕಸ್ಟಡಿಗೆ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪೇಶ್ ಸಾವಂತ್‌ನನ್ನು ಶನಿವಾರ ಮಾದಕವಸ್ತು ನಿಯಂತ್ರಣ ದಳದ ಅಧಿಕಾರಿಗಳು (ಎನ್‌ಸಿಬಿ)ಶನಿವಾರ ಬಂಧಿಸಿದ್ದರು. ಭಾನುವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಸಾವಂತ್‌ನನ್ನು ಎನ್‌ಸಿಬಿ ಕಸ್ಟಡಿಗೆ ನೀಡಿತು.

 ಎನ್‌ಸಿಪಿ ಮಾಹಿತಿ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾ ಚಕ್ರವರ್ತಿ ಸಹೋದರ ಶೌವಿಕ್ ಚಕ್ರವರ್ತಿ, ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಂಡ, ಸಾವಂತ್ ಮತ್ತು ಡ್ರಗ್ ಡೀಲರ್ ಜಯಿದಾ ವಿಲಾತ್ರ ಸೇರಿ ಏಳು ಮಂದಿಯನ್ನು ಬಂಧಿಸಿದೆ. ತನಿಖೆ ಮುಂದುವರಿದಿದೆ. 

ಮಾದಕವಸ್ತುಗಳ ಸಂಗ್ರಹಣೆ, ಬಳಕೆ ಮತ್ತು ಸಾಗಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೀಪೇಶ್‌ ಸಾವಂತ್‌ ಎಂಬಾತನ ಪಾತ್ರವಿದೆ ಎಂಬ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದ ಎನ್‌ಸಿಬಿಯು ದೀಪೇಶ್‌ನ ಹೇಳಿಕೆ ಮತ್ತು ಡಿಜಿಟಲ್‌ ಸಾಕ್ಷ್ಯಗಳ ಆಧಾರದ ಮೇಲೆ ಆತನನ್ನು ಬಂಧಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು