ಮಂಗಳವಾರ, ಮೇ 18, 2021
30 °C

ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್‌ ಚಂದ್ರ ಅಧಿಕಾರ ಸ್ವೀಕಾರ

ಪಿಟಿಐ‌ Updated:

ಅಕ್ಷರ ಗಾತ್ರ : | |

ನವದೆಹಲಿ: ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಸುಶೀಲ್‌ ಚಂದ್ರ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ. ಇವರು 24ನೇ ಮುಖ್ಯ ಚುನಾವಣಾ ಆಯುಕ್ತರಾಗಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಸುನಿಲ್‌ ಅರೋರಾ ಅವರ ಅಧಿಕಾರವಧಿ ಸೋಮವಾರ ಅಂತ್ಯಗೊಂಡಿದೆ. ಹೀಗಾಗಿ ಸುಶೀಲ್‌ ಚಂದ್ರ ಅವರ ನೇಮಕ ಮಾಡಿ ಕೇಂದ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿತ್ತು. ಇವರ ಅಧಿಕಾರಾವಧಿ 2022ರ ಮೇ 14ರ ವರೆಗೆ ಇರಲಿದೆ.

ಚಂದ್ರ ಅವರು 2019ರ ಫೆಬ್ರುವರಿ 14ರಂದು ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು.

ಚಂದ್ರ ಅವರ ಅಧಿಕಾರಾವಧಿಯಲ್ಲಿ ಆಯೋಗವು ಗೋವಾ, ಮಣಿಪುರ, ಉತ್ತರಾಖಂಡ, ಪಂಜಾಬ್ ಮತ್ತು ಉತ್ತರ ಪ್ರದೇಶ ವಿಧಾನಸಭೆಗಳಿಗೆ ಚುನಾವಣೆ ನಡೆಸಲಿದೆ. ಈ ರಾಜ್ಯಗಳಲ್ಲಿ ಸರ್ಕಾರಗಳ ಅವಧಿ ಮುಂದಿನ ವರ್ಷ ಮಾರ್ಚ್‌ ತಿಂಗಳಲ್ಲಿ ವಿವಿಧ ದಿನಾಂಕಗಳಲ್ಲಿ ಅಂತ್ಯಗೊಳ್ಳಲಿವೆ. ಉತ್ತರಪ್ರದೇಶ ವಿಧಾನಸಭೆ ಅವಧಿ ಮುಂದಿನ ವರ್ಷ ಮೇ 14ರಂದು ಅಂತ್ಯವಾಗಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು