ಶನಿವಾರ, ಸೆಪ್ಟೆಂಬರ್ 25, 2021
22 °C

ಕುಸ್ತಿಪಟು ಕೊಲೆಗೆ ಸುಶೀಲ್‌ ಪಿತೂರಿಯೇ ಕಾರಣ: ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಿರಿಯ ಕುಸ್ತಿಪಟುಗಳಲ್ಲಿ ತನ್ನ ಪ್ರಾಬಲ್ಯವನ್ನು ಪುನಃ ಸ್ಥಾಪಿಸಲು ಬಯಸಿದ್ದ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಸುಶೀಲ್‌ ಕುಮಾರ್‌, ನಡೆಸಿದ ಪಿತೂರಿಯಿಂದಾಗಿ ಯುವ ಕುಸ್ತಿಪಟುವಿನ ಕೊಲೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಛತ್ರಸಾಲ್‌ ಕ್ರೀಡಾಂಗಣದಲ್ಲಿ 23 ವರ್ಷದ ಕುಸ್ತಿ ಪಟು ಸಾಗರ್ ಧನಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಾವಿರ ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಅದರಲ್ಲಿ ಈ ಕುರಿತು ಉಲ್ಲೇಖಿಸಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಸುಶೀಲ್‌ ಕುಮಾರ್‌ ಸೇರಿದಂತೆ 13 ಆರೋಪಿಗಳ ಹೆಸರನ್ನು ಉಲ್ಲೇಖಿಸಲಾಗಿದೆ. ಸುಶೀಲ್‌ ಕುಮಾರ್‌ ಪಿತೂರಿ ನಡೆಸಿದ್ದರು ಎಂಬುದಕ್ಕೆ ಸಾಕಷ್ಟು ಸಾಕ್ಷ್ಯ, ಪುರಾವೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಗಳದ ವೇಳೆ ಗಾಯಗೊಂಡ ನಾಲ್ವರು ಸೇರಿದಂತೆ 155 ಸಾಕ್ಷಿಗಳ ಹೆಸರನ್ನು ಪೊಲೀಸರು ಆರೋಪಪಟ್ಟಿಯಲ್ಲಿ  ಉಲ್ಲೇಖ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು