ಶನಿವಾರ, ಜನವರಿ 16, 2021
19 °C

ರಾಜ್ಯಸಭೆ ಉಪ ಚುನಾವಣೆ: ಸುಶೀಲ್‌ ಮೋದಿ ನಾಮಪತ್ರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ರಾಜ್ಯಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸುಶೀಲ್‌ ಕುಮಾರ್‌ ಮೋದಿ ಅವರು ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಉಪ ಮುಖ್ಯಮಂತ್ರಿ ತಾರ್‌ಕಿಶೋರ್‌ ಪ್ರಸಾದ್‌, ಮಾಜಿ ಮುಖ್ಯಮಂತ್ರಿ ಜಿತನ್‌ ರಾಂ ಮಾಂಝಿ ಹಾಗೂ ಬಿಜೆಪಿಯ ಹಿರಿಯ ಮುಖಂಡರು ಸುಶೀಲ್‌ ಜೊತೆಗಿದ್ದರು.‌

ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ನೇತೃತ್ವದ ಹಿಂದಿನ ಸರ್ಕಾರಗಳಲ್ಲಿ ಸುಶೀಲ್‌ ಮೋದಿ ಉಪಮುಖ್ಯಮಂತ್ರಿಯಾಗಿದ್ದರು. ಬಿಜೆಪಿ ಹೈಕಮಾಂಡ್‌ ಸೂಚನೆ ಮೇರೆಗೆ ಅವರು ಈ ಬಾರಿ ಈ ಹುದ್ದೆ ಬಿಟ್ಟುಕೊಟ್ಟಿದ್ದರು.

ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ರಾಮ್‌ವಿಲಾಸ್‌ ಪಾಸ್ವಾನ್‌ ನಿಧನದಿಂದ ತೆರವಾದ ಸ್ಥಾನಕ್ಕೆ ಇದೇ 14ರಂದು ಚುನಾವಣೆ ನಿಗದಿಯಾಗಿದೆ. ಮಹಾ ಘಟಬಂಧನ ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ಅವಿರೋಧ ಆಯ್ಕೆಯಾಗುವ ಸಂಭವವಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು