ಬುಧವಾರ, ಜೂನ್ 29, 2022
24 °C

ನಕಲಿ ಮದ್ಯ ಸೇವನೆ ಶಂಕೆ; ಬಿಹಾರದಲ್ಲಿ 10 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಭಾಗಲ್‌ಪುರ/ಮಾಧೇಪುರ (ಬಿಹಾರ): ಬಿಹಾರದಲ್ಲಿ ಹೋಳಿ ಹಬ್ಬದ ಆಚರಣೆಯ ವೇಳೆ ನಕಲಿ ಮದ್ಯ ಸೇವನೆಯಿಂದ 10 ಮಂದಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ‌. 

ಭಾಗಲ್‌ಪುರ ಜಿಲ್ಲೆಯಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಭಾಗಲ್‌ಪುರ ಪಟ್ಟಣದಲ್ಲಿ ನಾಲ್ಕು, ನಾರಾಯಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಉಳಿದ ಸಾವಿನ ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ: 

ಹಾಗೆಯೇ ಮಾಧೇಪುರ ಜಿಲ್ಲೆಯ ಮುರಳಿಗಂಜ್ ಬ್ಲಾಕ್‌ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇಲ್ಲಿ ನಕಲಿ ಮದ್ಯ ಮಾರಾಟ ವ್ಯಾಪಕವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ನಕಲಿ ಮದ್ಯ ಸೇವಿನೆಯಿಂದಾಗಿ ಮೃತಪಟ್ಟಿದ್ದಾರೆಯೇ ಎಂಬುದನ್ನು ದೃಢಪಡಿಸಬಹುದು ಎಂದು ನಾರಾಯಣಪುರ ಎಸ್‌ಎಚ್‌ಒ ರಮೇಶ್ ಸಾಹ್ ತಿಳಿಸಿದ್ದಾರೆ.

ಮೃತಪಟ್ಟವರಲ್ಲಿ ಒಬ್ಬರಿಗೆ ಹೃದಯಾಘಾತವಾಗಿತ್ತು. ಇನ್ನೊಬ್ಬರು ಏಣಿ ಹತ್ತುವಾಗ ಕೆಳಗೆ ಬಿದ್ದಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಸಾಹಿಬ್‌ಗಂಜ್ ನಿವಾಸಿಯೊಬ್ಬರು ದೃಷ್ಟಿ ಕಳೆದುಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಧೇಪುರದಲ್ಲಿ ಶಂಕಿತ ನಕಲಿ ಮದ್ಯ ಸೇವಿಸಿ ಅಸ್ವಸ್ಥರಾದ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 

ಸುಮಾರು ಆರು ವರ್ಷಗಳ ಹಿಂದೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜ್ಯದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿದ್ದರು. ಇದರಿಂದಾಗಿ ನಕಲಿ ಮದ್ಯ ಮಾರಾಟ ಜಾಲ ವ್ಯಾಪಕವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು