ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು–ಕಾಶ್ಮೀರ: ಸಾಂಬಾ ಜಿಲ್ಲೆಯ ಮೂರು ಕಡೆಗಳಲ್ಲಿ ಶಂಕಿತ ಪಾಕ್‌ ಡ್ರೋನ್ ಪತ್ತೆ

Last Updated 30 ಜುಲೈ 2021, 1:10 IST
ಅಕ್ಷರ ಗಾತ್ರ

ಜಮ್ಮು: ಜಮ್ಮು–ಕಾಶ್ಮೀರದ ಸಾಂಬಾ ಜಿಲ್ಲೆಯ ಮೂರು ಪ್ರದೇಶಗಳಲ್ಲಿ ಪಾಕಿಸ್ತಾನದ್ದು ಎಂದು ಶಂಕಿಸಲಾದ ಡ್ರೋನ್‌ಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಡೀ–ಬ್ರಾಹ್ಮಣ, ಚಿಲಾದ್ಯ ಮತ್ತು ಗಗ್ವಾಲ್‌ ಪ್ರದೇಶಗಳಲ್ಲಿ ಗುರುವಾರ ರಾತ್ರಿ 8.30ರ ವೇಳೆಗೆ ಏಕಕಾಲದಲ್ಲಿ ಡ್ರೋನ್ ಕಾಣಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ಚಿಲಾದ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಡ್ರೋನ್‌ ಗುರಿಯಾಗಿಸಿ ಗಡಿಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಅದು ತಪ್ಪಿಸಿಕೊಂಡು ಪಾಕಿಸ್ತಾನದತ್ತ ತೆರಳಿದೆ. ಇತರ ಎರಡು ಡ್ರೋನ್‌ಗಳೂ ಕೆಲವೇ ಕ್ಷಣಗಳಲ್ಲಿ ಕಣ್ಮರೆಯಾಗಿವೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವಾರವಷ್ಟೇ ಜಮ್ಮು ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಭಾಗದ ಕಂಚಕ್‌ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಡ್ರೋನ್‌ ಅನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೊಡೆದುರುಳಿಸಿದ್ದರು. ಡ್ರೋನ್‌ನಿಂದ ಸ್ಫೋಟಕಗಳನ್ನೂ ವಶಪಡಿಸಿಕೊಳ್ಳಲಾಗಿತ್ತು.

ಜೂನ್‌ನಲ್ಲಿ ಸ್ಫೋಟಕಗಳನ್ನು ಹೊತ್ತು ಬಂದ ಡ್ರೋನ್‌ಗಳು ಜಮ್ಮು ವಾಯುನೆಲೆಗೆ ಅಪ್ಪಳಿಸಿದ್ದವು. ಇದು ಪಾಕಿಸ್ತಾನದ ಕೃತ್ಯ ಎಂದು ಅಧಿಕಾರಿಗಳು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT