ಮನೆ ಕೆಲಸದಾಕೆಗೆ ಚಿತ್ರಹಿಂಸೆ: ಅಮಾನತುಗೊಂಡಿದ್ದ ಬಿಜೆಪಿ ನಾಯಕಿ ಬಂಧನ

ರಾಂಚಿ: ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಆದರೆ ತನ್ನ ವಿರುದ್ಧದ ಆರೋಪ ರಾಜಕೀಯ ಪ್ರೇರಿತವಾಗಿದೆ ಎಂದು ದೂರಿರುವ ಸೀಮಾ, ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಹೇಳಿದ್ದಾರೆ.
ಅರ್ಗೊರಾ ಪೊಲೀಸ್ ಠಾಣೆಯಲ್ಲಿ ಸೀಮಾ ಪಾತ್ರಾ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾಜಿ ಐಎಎಸ್ ಅಧಿಕಾರಿ ಪತ್ನಿ ಆಗಿರುವ ಸೀಮಾ, 29 ವರ್ಷದ ಬುಡಕಟ್ಟು ಮಹಿಳೆಗೆ ಮಾನಸಿಕ, ದೈಹಿಕ ಹಿಂಸೆ ನೀಡಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡುತ್ತಿದ್ದ ವಿಡಿಯೊ ವೈರಲ್ ಆದ ಬಳಿಕ ಸೀಮಾ ಪಾತ್ರಾ ಅವರನ್ನು ಪಕ್ಷದಿಂದ ಬಿಜೆಪಿ ಅಮಾನತುಗೊಳಿಸಿತ್ತು.
#UPDATE | Jharkhand | Ranchi police arrested Seema Patra, suspended BJP leader and wife of ex-IAS officer for torturing her maid. The case was registered at Argora police station: Ranchi police https://t.co/ggg2IYoXpj
— ANI (@ANI) August 31, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.